ಬೆಂಗಳೂರು: ನಾವು ಯಾವುದೇ ಪೋನ್ ಟ್ಯಾಪಿಂಗ್ ಮಾಡಿಲ್ಲ. ಮಾಡೋದು ಇಲ್ಲ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪ ಎಲ್ಲ ಸುಳ್ಳು. ನಿರಾಧಾರವಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.
ಇಂದು ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ ಬಳಿಕ, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೃಷ್ಣಾದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಲೋಕಸಭೆಯ ನಂತರ ಬಿಬಿಎಂಪಿ ಚುನಾವಣೆ ಬಗ್ಗೆ ಚಿಂತನೆ
ಬಿಬಿಎಂಪಿ ಚುನಾವಣೆ ಬಗ್ಗೆ ಲೋಕಸಭೆ ಫಲಿತಾಂಶದ ನಂತರ ಚಿಂತಿಸಲಾಗುವುದು ಎಂದರು.
ಸುಳ್ಳು ಹೇಳುತ್ತಾರೆ
ಸಿಎಂ , ಡಿಸಿಎಂ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ ಎಂದು ಬಿಜೆಪಿಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್. ಅಶೋಕ್ ಕೇವಲ ಸುಳ್ಳು ಹೇಳುತ್ತಾರೆ ಎಂದರು.
ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ
ನಮ್ಮ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು. ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಮರೆಮಾಚಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
‘ಬೆಂಗಳೂರಿನ ಸೌಂದರ್ಯ’ಕ್ಕೆ ಹೆಚ್ಚು ಆದ್ಯತೆ ನೀಡಿ: ಸಿಟಿ ರೌಂಡ್ಸ್ ವೇಳೆ ‘ಸಿಎಂ ಸಿದ್ಧರಾಮಯ್ಯ’ ಸೂಚನೆ
BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು