ಬೆಂಗಳೂರು : 3,064 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ ಡಿಎಆರ್) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಪೊಲೀಸ್ ನೇಮಕಾತಿ ವಿಭಾಗ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದೆ.
3,064 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ ಡಿಎಆರ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಲ ನಕಲು ದಾಖಲೆ ಸೃಷ್ಟಿಸಿ ಮಾ.25 ರಿಂದ 27ರವರೆಗೆ ದೈಹಿಕ ಸಾಮರ್ಥ್ಯ ಮತ್ತು ದೈಹಿಕ ಸಹಿಷ್ಣುತೆ ಪರೀಕ್ಷೆಗಳು ನಡೆಯಲಿವೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಡಾ.ವಿಫುಲ್ ಕುಮಾರ್ ತಿಳಿಸಿದ್ದಾರೆ.
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಸಂಬಂಧ ನಿಗದಿಯಾಗಿದ್ದ ದೈಹಿಕ ಸಾಮರ್ಥ್ಯ, ದೈಹಿಕ ಸಹಿಷ್ಣುತೆ ಪರೀಕ್ಷೆಗಳನ್ನು ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದೆ. ಅಭ್ಯರ್ಥಿಗಳು ಯಾವುದೇ ತಪ್ಪು ಮಾಹಿತಿಗೆ ಕಿವಿಗೊಡಬಾರದು. ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ https://ksp recruitment.in, ಸಹಾಯವಾಣಿ 080-22943346,080-229430 39ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.