ಗುನಾ(ಮಧ್ಯಪ್ರದೇಶ): ಮಧ್ಯಪ್ರದೇಶದ ಗುನಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯರ್ಥಿನಿಯರು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ಫೋಟೋವೊಂದು ವೈರಲ್‌ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ವರದಿಯನ್ನು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ನಿರಾಕರಿಸಿದ್ದಾರೆ. ಆದ್ರೆ, ರಾಜ್ಯ ಪಂಚಾಯತ್ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ.

ಗುನಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಗುಂಪು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವುದನ್ನು ತೋರಿಸುವ ಛಾಯಾಚಿತ್ರಗಳು ಗುರುವಾರ ಸ್ಥಳೀಯ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿವೆ. ಮಾಧ್ಯಮ ವರದಿಗಳ ಪ್ರಕಾರ, ಈ ಘಟನೆ ಜಿಲ್ಲೆಯ ಚಕ್‌ದೇವ್‌ಪುರ ಗ್ರಾಮದಲ್ಲಿರುವ ಪ್ರಾಥಮಿಕ ಮತ್ತು ಮಧ್ಯಮ ಶಾಲೆಯ 5 ಮತ್ತು 6 ನೇ ತರಗತಿಯ ವಿದ್ಯಾರ್ಥಿನಿಯರು ಅಲ್ಲಿನ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವುದನ್ನು ತೋರಿಸುತ್ತದೆ.

ತನಿಖೆಯ ವೇಳೆ ಬಾಲಕಿಯರು, ʻನಾವು ಶೌಚಾಲಯಗಳನ್ನು ಸ್ವಚ್ಛಗೊಳಿಸಿಲ್ಲ. ಮಳೆಯಿಂದಾಗಿ ಕೊಳಕಾಗಿದ್ದರಿಂದ ಶೌಚಾಲಯವನ್ನು ಬಳಸಿದ ನಂತರ ಆವರಣದಲ್ಲಿರುವ ಹ್ಯಾಂಡ್ ಪಂಪ್‌ನಿಂದ ನೀರನ್ನು ತಂದು ಸುರಿದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆʼ ಎಂದು ಡಿಇಒ ಸೋನಮ್ ಜೈನ್ ತಿಳಿಸಿದ್ದಾರೆ.

ವಿದ್ಯಾರ್ಥಿನಿಯರು ಕೈಯಲ್ಲಿ ಪೊರಕೆ ಹಿಡಿದುಕೊಂಡು ಕೈ ಪಂಪ್‌ನಿಂದ ನೀರು ತರುವ ಮೂಲಕ ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ಫೋಟೋಗಳು ಸ್ಥಳೀಯ ಮಾಧ್ಯಮಗಳಲ್ಲಿ ಬೆಳಿಗ್ಗೆ ಕಾಣಿಸಿಕೊಂಡ ನಂತರ, ರಾಜ್ಯ ಸಚಿವ ಸಿಸೋಡಿಯಾ ಅವರು ಈ ಬಗ್ಗೆ ತನಿಖೆ ನಡೆಸುವಂತೆ ಗುನಾ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಪ್ರತ್ಯೇಕ ತನಿಖೆ ನಡೆಸಲು ಶಾಲಾ ಶಿಕ್ಷಣ ಇಲಾಖೆಯ ತಂಡವೂ ಗುರುವಾರ ಶಾಲೆಗೆ ಆಗಮಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

BIGG BREAKING NEWS : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ : ‘BSY’ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಿದ ಸುಪ್ರೀಂಕೋರ್ಟ್

SHOCKING NEWS: ಬಂದೂಕು ಹಿಡಿದು ಆಟವಾಡುತ್ತಿದ್ದ 3 ವರ್ಷದ ಬಾಲಕ… ಆಕಸ್ಮಿಕವಾಗಿ ಹಾರಿದ ಗುಂಡಿಗೆ ತಾಯಿ ಬಲಿ

BREAKING NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ‘ಮಾದಕ ದಂಧೆ’ : ಕಿರುತೆರೆ ಸಹನಟ ಸೇರಿ ಮೂವರು ಅರೆಸ್ಟ್

Share.
Exit mobile version