ಬೆಂಗಳೂರು : ಅನುದಾನ ಹಂಚಿಕೆಯಲ್ಲಿ ತಾರತಮ್ಯ ಪ್ರಶ್ನಿಸಿ ಬಿಜೆಪಿ ಶಾಸಕ ಪಿಐಎಲ್ ಸಲ್ಲಿಸಿದ್ದು ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟೆ ಸಲ್ಲಿಸಿದ್ದ ಪಿಐಎಲ್ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರ ಹಣಕಾಸು ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್ ನೀಡಿ ಆದೇಶ ಹೊರಡಿಸಿತು.
ವಿಚಾರಣೆ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ. ಕಾಂಗ್ರೆಸ್ ಶಾಸಕರಿಗೆ 50 ಕೋಟಿ ವಿಪಕ್ಷಗಳಿಗೆ 25 ಕೋಟಿ ಹಣ ನಿಗದಿ ಮಾಡಿದ್ದು, ಹಾಗಾಗಿ ಅನುದಾನದಲ್ಲಿ ತಾರತಮ್ಯ ಆರೋಪಿಸಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಸಲಾಗಿದೆ. ಈ ವೇಳೆ ಸರ್ಕಾರ, ಹಣಕಾಸು ಇಲಾಖೆ ಮತ್ತು ಬಾಗಲಕೋಟೆ ಜಿಲ್ಲಾಧಿಕಾರಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು, ಸಿಜೆ ವಿಭು ಬಕ್ರು ಹಾಗು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರಿದ್ದ ಪೀಠದಿಂದ ನೋಟಿಸ್ ಜಾರಿಗೊಳಿಸಲಾಗಿದೆ.








