ಬೆಂಗಳೂರು: 2018ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆಯಾದ ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ಜನಾಕರ್ಷಣೆಯ ಕೇಂದ್ರವಾಗುವಂತೆ ಸಮಗ್ರ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು.
ಇಂದು ವಿಕಾಸಸೌಧದ ಕಚೇರಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.
ಪಿಲಿಕುಳ ನಿಸರ್ಗಧಾಮ ಸಮಗ್ರ ಅಭಿವೃದ್ದಿಗೆ ಚಿಂತನೆ:
2018 ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ಉದ್ಘಾಟನೆಯಾದ ಮಂಗಳೂರಿನ ಪಿಲಿಕುಳ ನಿಸರ್ಗಧಾಮ ವನ್ನು ರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ದಿಗೊಳಿಸಲು ಅವಕಾಶಗಳಿವೆ. ಇಲ್ಲಿ ವಿಫುಲ ಜಾಗವಿದ್ದು ಅಂತರಾಷ್ಟ್ರೀಯ ಮಟ್ಟದ ಜನಾಕರ್ಷಣೆಯ ಕೇಂದ್ರವಾಗಿ ಅಭಿವೃದ್ದಿ ಪಡಿಸಬಹುದಾಗಿದೆ. 2018 ರಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಸಮಿತಿಗೆ ಅನುಮೋದನೆ ನೀಡಿದ್ದಾರೆ. ಪ್ರಾಧಿಕಾರದ ಮುಂದಿನ ಮೊದಲ ಸಭೆಯಲ್ಲಿ ಪಿಲಿಕುಳ ನಿಸರ್ಗಧಾಮದ ಸಮಗ್ರ ಅಭಿವೃದ್ದಿಗೆ ಅಗತ್ಯವಿರುವ ನೀಲಿ ನಕ್ಷೆಯ ಬಗ್ಗೆ ಚರ್ಚಿಸಲಾಗುವುದು. ನಂತರ ಮುಂದಿನ ಬಜೆಟ್‌ನಲ್ಲಿ ಅಗತ್ಯ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು. ಇದಕ್ಕೆ ಅಗತ್ಯವಿರುವ ಕನ್ಸಲ್ಟೆಂಟ್ ಏಜನ್ಸಿ ನೇಮಕದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
2025 ಜುಲೈ ನಲ್ಲಿ ಕ್ವಾಂಟಮ್ ಸಮಾವೇಶ:
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಿಸಲಾಗುತ್ತಿರುವ ನ್ಯಾನೋ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಇದೇ ರೀತಿಯಲ್ಲಿ ಮುಂಬರುವ 2025 ಜುಲೈ ತಿಂಗಳಲ್ಲಿ ಎರಡು ದಿನಗಳ ಕಾಲ ಕ್ವಾಂಟಮ್ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ. ಕ್ವಾಂಟಮ್ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ದೇಶಗಳೊಂದಿಗೆ ಸಂಪರ್ಕದಲ್ಲಿದ್ದು, ಜ್ಞಾನ ವಿನಿಮಯಕ್ಕೆ ಸಭೆಗೆ ಸಮಯಕ್ಕೆ ಮನವಿ ಮಾಡಲಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನಿರ್ದೇಶನದಂತೆ ನಮ್ಮ ರಾಜ್ಯ ಕ್ವಾಂಟಮ್ ಕ್ಷೇತ್ರದಲ್ಲಿ ಹೊಸ ಸಾಧನೆಗೆ ಉತ್ತೇಜಿಸುವುದು ಈ ಸಮಾವೇಶದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ತಯಾರಿಗಳನ್ನು ಪ್ರಾರಂಭಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಯಚೂರು, ಚಿಕ್ಕಮಗಳೂರು ಹಾಗೂ ಯಾದಗಿರಿಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸಚಿವರು ಸೂಚನೆ ನೀಡಿದರು. ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಲು ಯೋಜಿಸಲಾಗಿರುವ ಸೈನ್ಸ್ ಸಿಟಿಗೆ ಅಗತ್ಯ ಭೂಮಿಯನ್ನು ಈಗಾಗಲೇ ಕೆಐಎಡಿಬಿ ನೀಡಿದೆ. ಇದರ ಸರ್ವೆ ಕಾರ್ಯವು ಮುಗಿದಿದ್ದು ಡಿಪಿಆರ್ ರಚನೆಗೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಏಕ್‌ರೂಪ್ ಕೌರ್, ಕೆಸ್ಪೆಪ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
BIG NEWS : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ತನಿಖೆಯಲ್ಲಿ ಸ್ಪೋಟಕ ಅಂಶ ಬಹಿರಂಗ!