Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನಾಕರ್ಷಣೆಯ ಕೇಂದ್ರವಾಗಿ ‘ಪಿಲಿಕುಳ ನಿಸರ್ಗಧಾಮ’ವನ್ನು ಸಮಗ್ರ ಅಭಿವೃದ್ದಿಗೆ ಚಿಂತನೆ: ಸಚಿವ ಎನ್‌.ಎಸ್‌ ಬೋಸರಾಜು
KARNATAKA

ಜನಾಕರ್ಷಣೆಯ ಕೇಂದ್ರವಾಗಿ ‘ಪಿಲಿಕುಳ ನಿಸರ್ಗಧಾಮ’ವನ್ನು ಸಮಗ್ರ ಅಭಿವೃದ್ದಿಗೆ ಚಿಂತನೆ: ಸಚಿವ ಎನ್‌.ಎಸ್‌ ಬೋಸರಾಜು

By ವಸಂತ ಬಿ ಈಶ್ವರಗೆರೆ

ಬೆಂಗಳೂರು: 2018ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆಯಾದ ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ಜನಾಕರ್ಷಣೆಯ ಕೇಂದ್ರವಾಗುವಂತೆ ಸಮಗ್ರ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ವಿಕಾಸಸೌಧದ ಕಚೇರಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

ಪಿಲಿಕುಳ ನಿಸರ್ಗಧಾಮ ಸಮಗ್ರ ಅಭಿವೃದ್ದಿಗೆ ಚಿಂತನೆ:

2018 ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ಉದ್ಘಾಟನೆಯಾದ ಮಂಗಳೂರಿನ ಪಿಲಿಕುಳ ನಿಸರ್ಗಧಾಮ ವನ್ನು ರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ದಿಗೊಳಿಸಲು ಅವಕಾಶಗಳಿವೆ. ಇಲ್ಲಿ ವಿಫುಲ ಜಾಗವಿದ್ದು ಅಂತರಾಷ್ಟ್ರೀಯ ಮಟ್ಟದ ಜನಾಕರ್ಷಣೆಯ ಕೇಂದ್ರವಾಗಿ ಅಭಿವೃದ್ದಿ ಪಡಿಸಬಹುದಾಗಿದೆ. 2018 ರಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಸಮಿತಿಗೆ ಅನುಮೋದನೆ ನೀಡಿದ್ದಾರೆ. ಪ್ರಾಧಿಕಾರದ ಮುಂದಿನ ಮೊದಲ ಸಭೆಯಲ್ಲಿ ಪಿಲಿಕುಳ ನಿಸರ್ಗಧಾಮದ ಸಮಗ್ರ ಅಭಿವೃದ್ದಿಗೆ ಅಗತ್ಯವಿರುವ ನೀಲಿ ನಕ್ಷೆಯ ಬಗ್ಗೆ ಚರ್ಚಿಸಲಾಗುವುದು. ನಂತರ ಮುಂದಿನ ಬಜೆಟ್‌ನಲ್ಲಿ ಅಗತ್ಯ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು. ಇದಕ್ಕೆ ಅಗತ್ಯವಿರುವ ಕನ್ಸಲ್ಟೆಂಟ್‌ ಏಜನ್ಸಿ ನೇಮಕದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

2025 ಜುಲೈ ನಲ್ಲಿ ಕ್ವಾಂಟಮ್‌ ಸಮಾವೇಶ:

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಿಸಲಾಗುತ್ತಿರುವ ನ್ಯಾನೋ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಇದೇ ರೀತಿಯಲ್ಲಿ ಮುಂಬರುವ 2025 ಜುಲೈ ತಿಂಗಳಲ್ಲಿ ಎರಡು ದಿನಗಳ ಕಾಲ ಕ್ವಾಂಟಮ್‌ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ. ಕ್ವಾಂಟಮ್‌ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ದೇಶಗಳೊಂದಿಗೆ ಸಂಪರ್ಕದಲ್ಲಿದ್ದು, ಜ್ಞಾನ ವಿನಿಮಯಕ್ಕೆ ಸಭೆಗೆ ಸಮಯಕ್ಕೆ ಮನವಿ ಮಾಡಲಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನಿರ್ದೇಶನದಂತೆ ನಮ್ಮ ರಾಜ್ಯ ಕ್ವಾಂಟಮ್‌ ಕ್ಷೇತ್ರದಲ್ಲಿ ಹೊಸ ಸಾಧನೆಗೆ ಉತ್ತೇಜಿಸುವುದು ಈ ಸಮಾವೇಶದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ತಯಾರಿಗಳನ್ನು ಪ್ರಾರಂಭಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಯಚೂರು, ಚಿಕ್ಕಮಗಳೂರು ಹಾಗೂ ಯಾದಗಿರಿಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸಚಿವರು ಸೂಚನೆ ನೀಡಿದರು. ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಲು ಯೋಜಿಸಲಾಗಿರುವ ಸೈನ್ಸ್‌ ಸಿಟಿಗೆ ಅಗತ್ಯ ಭೂಮಿಯನ್ನು ಈಗಾಗಲೇ ಕೆಐಎಡಿಬಿ ನೀಡಿದೆ. ಇದರ ಸರ್ವೆ ಕಾರ್ಯವು ಮುಗಿದಿದ್ದು ಡಿಪಿಆರ್‌ ರಚನೆಗೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದರು.

ಸಭೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಏಕ್‌ರೂಪ್‌ ಕೌರ್‌, ಕೆಸ್ಪೆಪ್ಸ್‌ ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

BIG NEWS: ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನಾರಚನೆ ಇಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ | Karnataka Cabinet Expansion

BIG NEWS : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ತನಿಖೆಯಲ್ಲಿ ಸ್ಪೋಟಕ ಅಂಶ ಬಹಿರಂಗ!

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read
Recent News

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

State News
KARNATAKA

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು…

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.