ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿರುವಂತ ಜಗದೀಶ್ ಶೆಟ್ಟರ್ ಅವರು, ಇಂದು ನಾಮಪತ್ರವನ್ನು ಸಲ್ಲಿಸಿದರು.
ಇಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದಂತ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಲೋಕಸಭಾ ಅಭ್ಯರ್ಥಿಯಾಗಿ ಬಿಜೆಪಿ ಪಕ್ಷದಿಂದ ತನ್ನ ಉಮೇದುವಾರಿಕೆಯನ್ನು ಸಲ್ಲಿಸಿದರು.
ಜಗದೀಶ್ ಶೆಟ್ಟರ್ ಅವರಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಂಸದೆ ಮಂಗಳಾ ಅಂಗಡಿ,, ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಸಾಥ್ ನೀಡಿದರು.
ಈ ವೇಳೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭರ್ಜರಿ ಗೆಲುವು ಸಾಧಿಸಲಿದ್ದಾರೆ. ಅಭೂತಪೂರ್ವ ಜನ ಬೆಂಬಲ ಬೆಳಗಾವಿಯಲ್ಲಿ ಅವರಿಗೆ ಸಿಕ್ಕಿದೆ. ಶೆಟ್ಟರ್ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದರು.
‘ಸ್ಯಾನಿಟರಿ ಪ್ಯಾಡ್’ ನಂತೆ ಚೀನಾದಲ್ಲಿ ರೈಲು ನಿಲ್ದಾಣ ನಿರ್ಮಾಣ! ಫೋಟೋ ವೈರಲ್