ನವದೆಹಲಿ: ಹಿಂದುಗಳ ಗುರುತಿನಲ್ಲಿ ಸ್ಫೋಟ ನಡೆಸಲು ಪ್ಲ್ಯಾನ್ ಮಾಡಿದ್ದಾರೆ. ಇದನ್ನೇ ಆಧರಿಸಿ ಕೆಲವು ರಾಜಕಾರಣಿಗಳು ಹಿಂದೂಗಳ ತಲೆಗೆ ಕಟ್ಟುವ ಪ್ರಯತ್ನ ನಡೆದು ಬಿಟ್ಟಿತ್ತು. ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡಲಾಗುತ್ತಿತ್ತು. ದೇವರ ದಯೆಯಿಂದ ಇದು ಸಾಧ್ಯವಾಗಲಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಹಿಂದುಗಳು ಗುರುತಿನಲ್ಲಿ ಸ್ಫೋಟ ನಡೆಸಲು ಪ್ಲಾನ್ ಮಾಡಿದ್ದಾರೆ. ಇದನ್ನೇ ಆಧರಿಸಿ ಕೆಲವು ರಾಜಕಾರಣಿಗಳು ಹಿಂದೂಗಳ ತಲೆಗೆ ಕಟ್ಟುವ ಪ್ರಯತ್ನ ನಡೆದು ಬಿಟ್ಟಿತ್ತು. ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡಲಾಗುತ್ತಿತ್ತು. ದೇವರ ದಯೆಯಿಂದ ಇದು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.
ನಾನು ಸಿಎಂ ಜೊತೆಗೆ ವೈಯಕ್ತಿಕವಾಗಿ ಮಾತನಾಡಿ ಎನ್ಐಎಗೆ ನೀಡಲು ಆಗ್ರಹಿಸಿದ್ದೇನೆ. ಇದನ್ನು ಲಘುವಾಗಿ ಪರಿಗಣಿಸಬಾರದು. ಇದರ ಹಿಂದೆ ಜಿಹಾದಿ ಮಾನಸಿಕತೆ ಇದೆ. ದೊಡ್ಡ ಷಡ್ಯಂತ್ರ ನಡೆದಿರುವ ಸಾಧ್ಯತೆ ಇದೆ. ಸ್ಫೋಟಕ್ಕೆ ಖಚ್ಚಾ ವಸ್ತುಗಳನ್ನು ಯಾರು ನೀಡುತ್ತಿದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ ಎಂದರು.