ಬೆಂಗಳೂರು: ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಒಂದೇ ಬಾರಿಗೆ ಚುನಾವಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
ಜಿಬಿಎ ಚುನಾವಣೆ ಸಂಬಂಧಿಸಿದಂತೆ ಇಂದು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದು, ಪಾಲಿಕೆ ಚುನಾವಣೆಗಳು ಯಾವಾಗ ನಡೆಯಬಹುದು ಎಂದು ಕೇಳಿದಾಗ, “ನ್ಯಾಯಾಲಯ ಆದೇಶ ನೀಡಿದೆ. ನಮ್ಮ ಸರ್ಕಾರ ಸಂವಿಧಾನದ 73, 74ನೇ ತಿದ್ದುಪಡಿಗೆ ಬದ್ಧವಾಗಿದೆ. ಯುವಕರಿಗೆ ಅಧಿಕಾರ ನೀಡಬೇಕು, ಹೊಸ ಪೀಳಿಗೆ ಅಧಿಕಾರಕ್ಕೆ ಬರಬೇಕು. ಈಗ ಐದು ಪಾಲಿಕೆಗಳಿಂದ 369 ವಾರ್ಡ್ ಗಳನ್ನು ರಚಿಸಲಾಗಿದೆ ಎಂದರು.
ಇನ್ನು ಬೆಂಗಳೂರಿನ ಹೊರವಲಯವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ. ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಸಲು ನಮ್ಮ ಸರ್ಕಾರ ತೀರ್ಮಿನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಸಿಎಂ ಹಾಗೂ ಸಚಿವರು ತಿಳಿಸಿದ್ದಾರೆ. ಗ್ರಾಮ ಪಂಚಾಯ್ತಿ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಒಂದೇ ಬಾರಿಗೆ ಎಲ್ಲವನ್ನು ನಡೆಸಲು ಚಿಂತನೆ ನಡೆಯುತ್ತಿದೆ” ಎಂದರು.
GOOD NEWS: ಔಷಧ ಪ್ಯಾಕೆಟ್ ಮೇಲಿನ QR ಕೋಡ್: ಸಚಿವ ದಿನೇಶ್ ಗುಂಡೂರಾವ್








