ಮಂಡ್ಯ: ನನಗೆ 5 ವರ್ಷ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಹಕಾರ ಕೊಡಿ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Farmer CM HD Kumaraswamy ) ಜನತೆಯಲ್ಲಿ ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಟಿ ನರಸೀಪುರ ತಾಲೂಕಿನ ತಲಕಾಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೆಡಿಎಸ್ ಪಕ್ಷದಿಂದ ನಡೆಸುತ್ತಿರುವಂತ ಪಂಚರತ್ನ ಕಾರ್ಯಕ್ರಮವೇ ಜನಪರ ಕಾರ್ಯಕ್ರಮವಾಗಿದೆ. ಶಾಸಕ ಅಶ್ವಿನ್ ಕುಮಾರ್ ನಿಮ್ಮ ಕಷ್ಟ ಸುಖದಲ್ಲಿ ಭಾಗಿಯಾಗುತ್ತಿದ್ದಾರೆ ಎಂದರು.
5 ವರ್ಷ ಸ್ವತಂತ್ರ ಸರ್ಕಾರ ನಡೆಸಲು ನನಗೆ ಸಹಕಾರ ಕೊಡಿ. ಪಂಚರತ್ನ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತೇನೆ. ಜನಪರ ಆಡಳಿತ ನಡೆಸಿ, ತೋರಿಸುವುದಾಗಿ ಮನವಿ ಮಾಡಿದರು.
26ಕ್ಕೆ ಮೈಸೂರಿನಲ್ಲಿ ಪಂಚರತ್ನ ಸಮಾರೋಪ: 4 ಕೀ.ಮೀ ರೋಡ್ ಶೋ
ಬೆಂಗಳೂರು: ಶಾಸಕರ ಸಲಹೆಯ ಮೇರೆಗೆ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶಕ್ಕೆ ಕುಂಬಳಗೋಡಿನಿಂದ ರೋಡ್ ಬದಲು ಸಮಾವೇಶದ ಸ್ಥಳಕ್ಕೆ ನಾಲ್ಕು ಕೀ.ಮಿ ದೂರ ಮಾತ್ರ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡರನ್ನು ಕರೆದುಕೊಂಡು ಹೋಗಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶದ ಪೂರ್ವಸಿದ್ಧತೆ ಬಗ್ಗೆ ಶಾಸಕರು, ಪಕ್ಷದ ತಾಲ್ಲೂಕು, ಜಿಲ್ಲಾ ಅಧ್ಯಕ್ಷರು ಹಾಗೂ ಅಭ್ಯರ್ಥಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಈ ವಿಷಯ ತಿಳಿಸಿದರು.
ಸಮಾರೋಪ ಸಮಾವೇಶದ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ವೈದ್ಯರು ಹಾಗೂ ಎಲ್ಲ ಶಾಸಕರ ಸಲಹೆಯ ಮೇರೆಗೆ ಸಮಾರೋಪ ಸಮಾವೇಶದ ರೋಡ್ ಶೋ ವನ್ನು ನಾಲ್ಕು ಕೀ. ಮೀ ಗೆ ಸೀಮಿತಗೊಳಿಸಲಾಗಿದೆ ಎಂದರು.
ಈ ತಿಂಗಳ 26ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಈಗಾಗಲೇ ಎಲ್ಲಾ ರೀತಿಯ ಸಿದ್ದತೆ ಆಗಿದೆ. ಶ್ರೀ ಚಾಮುಂಡೇಶ್ವರಿ ಸನ್ನಿದಾನದಲ್ಲಿ ತಾಯಿ ಆಶಿರ್ವಾದ ಇರಲಿ ಅಂತಲೇ ಅಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ. ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.
ಪಂಚರತ್ನ ರಥಯಾತ್ರೆ ರಾಜ್ಯದ 85ಕ್ಷೇತ್ರದಲ್ಲಿ ಪೂರ್ಣಗೊಳಿಸಿದ್ದೇನೆ. ಎಲ್ಲೆಡೆ ಉತ್ತಮ ಜನ ಸ್ಪಂದನೆ ಸಿಕ್ಕಿದೆ ಎಂದು ಅವರು ತಿಳಿಸಿದರು.
ಬಿಜೆಪಿಗೆ ನೈತಿಕತೆ ಅನ್ನುವುದು ಇಲ್ಲ
ರೌಡಿಶೀಟರ್ ಸೈಲೆಂಟ್ ಸುನೀಲ ಬಿಜೆಪಿ ಪಕ್ಷದ ಅಧಿಕೃತ ಸದಸ್ಯತ್ವ ಪಡೆದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಮಾಜಿ ಮುಖ್ಯಮಂತ್ರಿ ಅವರು; ಸೈಲೆಂಟ್ ಸುನೀಲ, ಸ್ಯಾಂಟ್ರೋ ರವಿ, ಫೈಟರ್ ರವಿ ಅಂತವರೇ ಬಿಜೆಪಿಗೆ ಸೇರಿಕೊಳ್ಳೋದು. ಇವರಿಗೆ ಪ್ರಾಮುಖ್ಯತೆ ಕೊಡೋದು ಬೇಡ ಎನ್ನುವುದು ಅಭಿಪ್ರಾಯ ಎಂದರು.
ಬಿಜೆಪಿಯವರು ನೈತಿಕತೆ ಭಾಷಣ ಮಾಡುತ್ತಾರೆ. ಅದರ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ. ಜನ ಇಂತವರ ಬಗ್ಗೆ, ಇಂಥ ಪಕ್ಷಗಳ ಬಗ್ಗೆ ಎಚ್ಚರವಾಗಿರಬೇಕು. ಯಾವುದೇ ಕಾರಣಕ್ಕೂ ಇಂಥವರಿಗೆ ಮತ ನೀಡಬಾರದು ಎಂದರು ಕುಮಾರಸ್ವಾಮಿ ಅವರು.
ಕಾಂಗ್ರೆಸ್, ಬಿಜೆಪಿ ರೌಡಿ ಶೀಟರ್ ಗಳಿಗೆ ಎಗ್ಗಿಲ್ಲದೆ ಪಕ್ಷದಲ್ಲಿ ಟಿಕೆಟ್ ನೀಡುತ್ತಿವೆ. ಆಸೆಗೆ ಅಮಾಯಕರ ಜೀವನ ಬಲಿ ಪಡೆದವರನ್ನ ಪಕ್ಷಕ್ಕೆ ಸೇರಿಸಿಕೊಂಡು ಟಿಕೆಟ್ ಕೊಡ್ತಿದ್ದಾರೆ. ಅದೇ ಅವರ ಪಕ್ಷಕ್ಕೆ ಮುಳುಗಲಿದೆ. ಪಾಪದ ಹಣ ಮಾಡಲು ಹೊರಟಿದ್ದು, ಅವರಿಗೆ ಮುಳುವಾಗಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
BREAKING NEWS : ತಜಕಿಸ್ತಾನದಲ್ಲಿ 4.4 ತೀವ್ರತೆಯ ಭೂಕಂಪ | Earthquake in Tajikistan
BIGG NEWS : ಐಸಿಸಿ ಬಂಧನ ವಾರಂಟ್ ಬಳಿಕ ರಷ್ಯಾ ಆಕ್ರಮಿತ ಮಾರಿಯುಪೋಲ್, ಕ್ರೈಮಿಯಾಗೆ ‘ಪುಟಿನ್’ ಭೇಟಿ
‘ವಂಡರ್ ಲಾ’ ಪ್ರಿಯರೇ ಗಮನಿಸಿ: ಮಾ.25ರಂದು ‘ಬೆಂಗಳೂರು ಪಾರ್ಕ್’ನಲ್ಲಿ ‘ಡಿಜೆ ನೈಟ್’ ಆಯೋಜನೆ