ಸುಭಾಷಿತ :

Wednesday, January 29 , 2020 9:34 PM

ಕರ್ನಾಟಕದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ : ಪ್ರಧಾನಿ ಮೋದಿ


Monday, December 9th, 2019 1:50 pm

ಹಜರಿಬಾಗ್ : ಕರ್ನಾಟಕದ ಜನತೆ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಗೆ ತಕ್ಕ ಪಾಠ ಕಲಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಾರ್ಖಂಡ್ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕದ ಮತದಾರರು ಕಾಂಗ್ರೆಸ್-ಜೆಡಿಎಸ್ ಗೆ ತಕ್ಕ ಪಾಠ ಕಲಿಸಿದ್ದಾರೆ. ಇಂದಿನ ಉಪಚುನಾವಣೆ ಫಲಿತಾಂಶ ದೇಶದ ಎಲ್ಲಾ ರಾಜ್ಯಗಳಿಗೂ ಒಂದು ಸಂದೇಶ ನೀಡಿದೆ. ಮತದಾರರ ತೀರ್ಪಿಗೆ ವಿರುದ್ಧವಾಗಿ ಹೋಗಿ ಮತದಾರರನ್ನು ಅವಮಾನಿಸಿದವರಿಗೆ ಮತದಾರರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂಬುದಕ್ಕೆ ಇದುವೇ ನಿದರ್ಶನ ಎಂದರು.

ಜನರಿಗೆ ಸ್ಥಿರ ಸರ್ಕಾರ ಬೇಕು. ಆ ಸ್ಥಿರ ಸರ್ಕಾರ ನೀಡುವ ಪಕ್ಷವಾಗಿ ಬಿಜೆಪಿ ಮೇಲೆ ಮತದಾರರು ನಂಬಿಕೆ ಇಟ್ಟಿದ್ದಾರೆ ಎಂದು ಹೇಳಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions