ಬೆಳಗಾವಿ :ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ನಾಲ್ಕು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಶನಿವಾರ ರಾತ್ರಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಇತರ ಗಣ್ಯರು ಲೋಕಸಭಾ ಚುನಾವಣೆಗಾಗಿ ಬೆಳಗಾವಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.
ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಶಿವಮೊಗ್ಗ, ಮೈಸೂರು, ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಮೋದಿ ಅವರು ಪ್ರಚಾರ, ರೋಡ್ಶೋ ನಡೆಸಿದ್ದರು, ಇಂದು ಬೆಳಗಾವಿ, ದಾವಣಗೆರೆ, ಉತ್ತರ ಕನ್ನಡ, ವಿಜಯನಗರ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 14 ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆಯಿತು. ಬಾಗಲಕೋಟೆ, ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಕಲಬುರಗಿ, ಹಾವೇರಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.