ನವದೆಹಲಿ: ಸಮರ್ಕಂಡ್ನಲ್ಲಿ ನಡೆದ 22 ನೇ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯನ್ನು ಯಶಸ್ವಿಯಾಗಿ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಬೆಯನ್ನು ಪೂರ್ಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಗೆ ಆಗಮಿಸಿದರು.
ಸಮರ್ಕಂಡ್ಗೆ ತೆರಳಿದ್ದ ಪ್ರಧಾನಿ ಮೋದಿ ಅವರನ್ನು ಆತಿಥೇಯ ರಾಷ್ಟ್ರ ಉಜ್ಬೇಕಿಸ್ತಾನ್ ಅಧ್ಯಕ್ಷ ಶವಕತ್ ಮಿರ್ಜಿಯೋವ್ ಸ್ವಾಗತಿಸಿದರು. ಶೃಂಗಸಭೆಯಲ್ಲಿ, ಪಿಎಂ ಮೋದಿ ಹಲವಾರು SCO ಸದಸ್ಯ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು.
ಪ್ರಧಾನಿಯವರು ಉಜ್ಬೇಕಿಸ್ತಾನ್ ಅಧ್ಯಕ್ಷ ಮಿರ್ಜಿಯೋಯೆವ್ ಅವರೊಂದಿಗೆ ದ್ವಿಪಕ್ಷೀಯ ಸಭೆಯನ್ನೂ ನಡೆಸಿದರು. ಉಭಯ ನಾಯಕರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಜೊತೆಗೆ ಪರಸ್ಪರ ಆಸಕ್ತಿಯ ಇತರ ವಿಷಯಗಳ ಬಗ್ಗೆ ಚರ್ಚಿಸಿದರು. ಅಫ್ಘಾನಿಸ್ತಾನ ಸೇರಿದಂತೆ ಪ್ರಾದೇಶಿಕ ವಿಷಯಗಳ ಬಗ್ಗೆಯೂ ಚರ್ಚಿಸಲಾಯಿತು ಅಲ್ಲಿ ಅವರು ಅಫ್ಘಾನಿಸ್ತಾನದ ಪ್ರದೇಶವನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಬಾರದು ಎಂದು ಒತ್ತಿ ಹೇಳಿದರು.
ಇದಕ್ಕೂ ಮುನ್ನ ಪ್ರಧಾನಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದರು. ಉಕ್ರೇನ್-ರಷ್ಯಾ ಸಂಘರ್ಷದ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು.
BIG NEWS : Johnson & Johnson’s ಬೇಬಿ ಪೌಡರ್ ತಯಾರಿಕಾ ಪರವಾನಗಿ ರದ್ದುಗೊಳಿಸಿದ ಮಹಾರಾಷ್ಟ್ರ…?
ಒಡಿಶಾದಲ್ಲಿ ಘೋರ ದುರಂತ: ಬಸ್ಗೆ ಟ್ರಕ್ ಡಿಕ್ಕಿಯೊಡೆದು 6 ಮಂದಿ ನೌಕರರ ದುರ್ಮರಣ, ಹಲವರ ಸ್ಥಿತಿ ಗಂಭೀರ
BIGG NEWS : ಕರ್ನಾಟಕ ವಿಧಾನಸಭೆಯಲ್ಲಿ ಎರಡು ಮಹತ್ವದ ಮಸೂದೆಗಳು ಅಂಗೀಕಾರ