ಕಲಬುರಗಿ : ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಕಲಬುರ್ಗಿಗೆ ಆಗಮಿಸಲಿದ್ದು ಈ ಹಿನ್ನಲೆಯಲ್ಲಿ ಕಲ್ಬುರ್ಗಿಯ ವಿಮಾನ ನಿಲ್ದಾಣದ ಸುತ್ತಮುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸಿಆರ್ಪಿಸಿ ಸೆಕ್ಷನ್ 144ರ ಅಡಿ ಗ್ರೌಂಡ್ ಹೋರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಭದ್ರತಾ ದೃಷ್ಟಿಯಿಂದ ಡ್ರೋನ್ ಕ್ಯಾಮರಾ ಹಾರಾಟ ನಿಷೇಧಿಸಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಾಗಿದೆಎಂದು ತಿಳಿದುಬಂದಿದೆ.ನಾಳೆ ಬೆಳಿಗ್ಗೆ ಆರರಿಂದ ಸಂಜೆ ಆರು ಗಂಟೆವರೆಗೆ ಡ್ರೋನ್ ಹಾರಾಟ ನಿಷೇಧವಿರಲಿದೆ.
ನಾಳೆ ಬೆಳಗ್ಗೆ 9:40ಕ್ಕೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.ವಿಮಾನ ನಿಲ್ದಾಣದಿಂದ ನೇರವಾಗಿ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಿದ್ದು, ಅಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ವಿತರಿಸಲಿದ್ದಾರೆ.
ಸೋಲಾಪುರದಿಂದ ಮಧ್ಯಾನ ಒಂದು ಗಂಟೆಗೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.ನಾಳೆ ಮಧ್ಯಾಹ್ನ 1.05ಕ್ಕೆ ವಿಮಾನ ನಿಲ್ದಾಣದಲ್ಲಿ ಮೋದಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.