ನವದೆಹಲಿ: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತದ ಮನು ಬಾಕರ್ ಅವರು ಇಂದು ಮೊದಲ ಪದಕವನ್ನು ತಂದುಕೊಡುವ ಮೂಲಕ, ಭಾರತದ ಪದಕದ ಭೇಟೆಗೆ ಮುನ್ನುಡಿ ಬರೆದಿದ್ದರು. ಇಂತಹ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ಮಾಡಿ, ಅಭಿನಂದನೆಯನ್ನು ತಿಳಿಸಿದ್ದಾರೆ.
ಪ್ಯಾರೀಸ್ ಒಲಂಪಿಕ್ಸ್ 2024ರ ಇಂದಿನ ಪಂದ್ಯಾವಳಿಯ ವೇಳೆಯಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಭಾರತದ ಮನು ಬಾಕರ್ ಅವರು ಕಂಚಿನ ಪದಕವನ್ನು ಗೆದ್ದಿದ್ದರು. ಇದು ಭಾರತದ ಮೊದಲ ಪದಕವಾಗಿದೆ.
ಇಂದು ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದಂತ ಮನು ಬಾಕರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕೂಡಲೇ ಅಭಿನಂದನೆಯನ್ನು ತಿಳಿಸಿದ್ದರು.
A historic medal!
Well done, @realmanubhaker, for winning India’s FIRST medal at #ParisOlympics2024! Congrats for the Bronze. This success is even more special as she becomes the 1st woman to win a medal in shooting for India.
An incredible achievement!#Cheer4Bharat
— Narendra Modi (@narendramodi) July 28, 2024
ಈ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಮನು ಬಾಕರ್ ಅವರಿಗೆ ದೂರವಾಣಿ ಕರೆ ಮಾಡಿ, ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
#WATCH | Prime Minister Narendra Modi interacts with Olympic Bronze Medalist Manu Bhaker and congratulated her on winning a Bronze medal in Women’s 10 M Air Pistol at #ParisOlympics2024 pic.twitter.com/IHrumNS5yv
— ANI (@ANI) July 28, 2024
ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜ್ಯ ಸರ್ಕಾರದ ಸಹಕಾರ ಮುಖ್ಯ: ಬಸವರಾಜ ಬೊಮ್ಮಾಯಿ
BREAKING: ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ವಿಚಾರ: ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್