ನವದೆಹಲಿ: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ಭಾರತ, ಐಸಿಸಿ ಪುರುಷರ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ತವರು ನೆಲದಲ್ಲಿ ಮೂರು ಬಾರಿ ವಿಶ್ವಕಪ್ ಗೆದ್ದ ಏಕೈಕ ದೇಶ ಎಂಬ ಐತಿಹಾಸಿಕ ದಾಖಲೆಯನ್ನು ಭಾರತ ತನ್ನದಾಗಿಸಿಕೊಂಡಿದೆ.
ಪ್ರಧಾನಿ ಮೋದಿ ಶ್ಲಾಘನೆ
ಭಾರತ ತಂಡದ ಈ ಐತಿಹಾಸಿಕ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಎಕ್ಸ್ (ಟ್ವಿಟರ್) ಮೂಲಕ ಸಂದೇಶ ಹಂಚಿಕೊಂಡ ಅವರು, “ಈ ಗಮನಾರ್ಹ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ ಮತ್ತು ತಂಡದ ಕೆಲಸವನ್ನು ಪ್ರತಿಬಿಂಬಿಸುತ್ತದೆ. ತಂಡದ ಈ ಯಶಸ್ಸು ಪ್ರತಿಯೊಬ್ಬ ಭಾರತೀಯನ ಹೃದಯವನ್ನು ಹೆಮ್ಮೆ ಮತ್ತು ಸಂತೋಷದಿಂದ ತುಂಬಿದೆ. ಚೆನ್ನಾಗಿದೆ ಟೀಮ್ ಇಂಡಿಯಾ!” ಎಂದು ಅಭಿನಂದಿಸಿದ್ದಾರೆ.
Champions!
Congratulations to the Indian team on winning the ICC Men’s T20 World Cup!
This remarkable triumph reflects exceptional skills, determination and teamwork. They have shown outstanding grit through the tournament.
This victory has filled every Indian heart with…
— Narendra Modi (@narendramodi) March 8, 2026
ಟೀಂ ಇಂಡಿಯಾಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
ವಿಶ್ವ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಟಿ20 ವಿಶ್ವಕಪ್ ಪಂದ್ಯಾವಳಿಯ ಮೊದಲ ದಿನದಿಂದಲೇ ಚಾಂಪಿಯನ್ ಆಟವಾಡುತ್ತಾ ಬಂದಿದ್ದ ನಮ್ಮ ತಂಡ ಪ್ರಶಸ್ತಿಗೆ ಅತ್ಯಂತ ಅರ್ಹ ತಂಡವಾಗಿತ್ತು. ಯುವ ಆಟಗಾರರಿಂದಲೇ ತುಂಬಿದ್ದ ಈ ತಂಡ ಅನುಭವದಲ್ಲಿ ಕಡಿಮೆಯಿದ್ದರೂ, ಪ್ರತಿಭಾಶಾಲಿಗಳಿಂದ ಕೂಡಿತ್ತು. ತವರು ಪ್ರೇಕ್ಷಕರ ಬೆಂಬಲ, ಆಟಗಾರರ ಶ್ರಮ ಮತ್ತು ಕೋಟ್ಯಂತರ ಭಾರತೀಯರ ಹಾರೈಕೆ ವಿಶ್ವಕಪ್ ಕಿರೀಟವಾಗಿ ನಮ್ಮವರ ಮುಡಿ ಸೇರಿದೆ.
ಇಂದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್, ಅದ್ಭುತ ಬೌಲಿಂಗ್, ಅತ್ಯುತ್ತಮ ಕ್ಷೇತ್ರರಕ್ಷಣೆ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಭಾರತ ತಂಡ ಶ್ರೇಷ್ಠ ಪ್ರದರ್ಶನ ತೋರಿದೆ. ಉತ್ತಮ ಪ್ರದರ್ಶನ ನೀಡುತ್ತಾ ಫೈನಲ್ ಪಂದ್ಯದ ವರೆಗೆ ಬಂದಿರುವ ನ್ಯೂಜಿಲೆಂಡ್ ತಂಡದ ಸಾಧನೆ ಕೂಡ ಕಡಿಮೆಯೇನಲ್ಲ. ಅವರಿಗೂ ನನ್ನ ಅಭಿನಂದನೆಗಳು.
ಕ್ರಿಕೆಟ್ ಜಗತ್ತಿನಲ್ಲಿ ಭಾರತದ ಕೀರ್ತಿ ಪತಾಕೆ ಮತ್ತೆ ಮುಗಿಲೆತ್ತರದಲ್ಲಿ ರಾರಾಜಿಸುತ್ತಿದೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೊಂದು ಅವಿಸ್ಮರಣೀಯ ದಿನ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.
ವಿಶ್ವ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಟಿ20 ವಿಶ್ವಕಪ್ ಪಂದ್ಯಾವಳಿಯ ಮೊದಲ ದಿನದಿಂದಲೇ ಚಾಂಪಿಯನ್ ಆಟವಾಡುತ್ತಾ ಬಂದಿದ್ದ ನಮ್ಮ ತಂಡ ಪ್ರಶಸ್ತಿಗೆ ಅತ್ಯಂತ ಅರ್ಹ ತಂಡವಾಗಿತ್ತು. ಯುವ ಆಟಗಾರರಿಂದಲೇ ತುಂಬಿದ್ದ ಈ ತಂಡ ಅನುಭವದಲ್ಲಿ ಕಡಿಮೆಯಿದ್ದರೂ, ಪ್ರತಿಭಾಶಾಲಿಗಳಿಂದ ಕೂಡಿತ್ತು. ತವರು ಪ್ರೇಕ್ಷಕರ ಬೆಂಬಲ, ಆಟಗಾರರ ಶ್ರಮ… pic.twitter.com/Bcoem7aTGS
— Siddaramaiah (@siddaramaiah) March 8, 2026








