ಬೆಂಗಳೂರು : ಹಿರಿಯ ನಟ ನಿರ್ಮಾಪಕ ನಿರ್ದೇಶಕ ದ್ವಾರಕೀಶ್ (81) ಅವರು ಹೃದಯಾಘಾತದಿಂದ ನಿಧನರಾಗಿದ್ದು, ದ್ವಾರಕೀಶ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಜಿ ಅವರ ಕೊಡುಗೆಗಳು ಅಪಾರವಾಗಿದ್ದು, ದಶಕಗಳ ಮರೆಯಲಾಗದ ಪ್ರದರ್ಶನಗಳು ಮತ್ತು ಅದ್ಭುತ ಚಲನಚಿತ್ರಗಳನ್ನು ವ್ಯಾಪಿಸಿದೆ. ಪ್ರೇಕ್ಷಕರನ್ನು ಆಕರ್ಷಿಸುವ ಮತ್ತು ಯುವ ಪ್ರತಿಭೆಗಳನ್ನು ಬೆಂಬಲಿಸುವ ಅವರ ಸಾಮರ್ಥ್ಯವು ಕನ್ನಡ ಚಿತ್ರರಂಗವನ್ನು ರೂಪಿಸುವಲ್ಲಿ ಅವರ ಬಹುಮುಖಿ ಪಾತ್ರದ ಒಂದು ನೋಟವನ್ನು ನೀಡಿತು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಅಸಾಧಾರಣ ಪ್ರಯಾಣವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
ಇಂದು ಬೆಳಿಗ್ಗೆ 11:30ಕ್ಕೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಕುಟುಂಬದ ಮೂಲಗಳಿಂದ ಮಾಹಿತಿ ನೀಡಲಾಗಿದ್ದು, ಇಂದು ಬೆಳಿಗ್ಗೆ 7.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ನಟನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಜನರು ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದಿದ್ದಾರೆ. ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಕೂಡ ಅಂತಿಮ ದರ್ಶನ ಪಡೆದಿದ್ದಾರೆ.
ಇನ್ನೂ ಇಂದು ಬೆಳಿಗ್ಗೆ 7.30ಕ್ಕೆ ರವೀಂದ್ರ ಕಲಾಕ್ಷೇತ್ರಕ್ಕೆ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಅಲ್ಲಿಯೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆ ನಂತ್ರ ಬೆಳಿಗ್ಗೆ 11.30ಕ್ಕೆ ಚಾಮರಾಜಪೇಟೆಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
Dwarakish Ji’s contributions to the film industry are immense, spanning decades of unforgettable performances and groundbreaking films. His ability to captivate audiences and support young talent gave a glimpse of his multifaceted role in shaping Kannada cinema. Saddened by his…
— Narendra Modi (@narendramodi) April 16, 2024