ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದ ಮನು ಭಾಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾನುವಾರ ನಡೆದ 10 ಮೀಟರ್ ಏರ್ ಪಿಸ್ತೂಲ್ ಫೈನಲ್ನಲ್ಲಿ ಭಾಕರ್ ಕಂಚಿನ ಪದಕ ಗೆದ್ದರು.
ಪ್ರಧಾನಿ ಮೋದಿ ಅವರ ಗೆಲುವನ್ನು “ನಂಬಲಾಗದ ಸಾಧನೆ” ಎಂದು ಕರೆದರು. ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ನಲ್ಲಿ, ಪ್ರಧಾನಿ ಮೋದಿ, “ಐತಿಹಾಸಿಕ ಪದಕ! 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟ ಮನು ಭಾಕರ್ಗೆ ಅಭಿನಂದನೆಗಳು. ಕಂಚಿನ ಪದಕಕ್ಕೆ ಅಭಿನಂದನೆಗಳು. ಈ ಯಶಸ್ಸು ಇನ್ನೂ ವಿಶೇಷವಾಗಿದೆ. ಏಕೆಂದರೆ ಅವರು ಭಾರತಕ್ಕಾಗಿ ಶೂಟಿಂಗ್ನಲ್ಲಿ ಪದಕ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು ಎಂದಿದ್ದಾರೆ.
A historic medal!
Well done, @realmanubhaker, for winning India’s FIRST medal at #ParisOlympics2024! Congrats for the Bronze. This success is even more special as she becomes the 1st woman to win a medal in shooting for India.
An incredible achievement!#Cheer4Bharat
— Narendra Modi (@narendramodi) July 28, 2024
ITR Filling: ಜುಲೈ 31 ರೊಳಗೆ ತೆರಿಗೆ ಆಡಳಿತ ಬದಲಾಗಬಹುದೇ? ಆದಾಯ ತೆರಿಗೆ ಇಲಾಖೆ ನಿಯಮಗಳು ಏನು ಹೇಳುತ್ತವೆ?