ನವದೆಹಲಿ: ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಸಂಭವಿಸಿದ ಭೂಕಂಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಸಿದ್ಧ ಎಂದರು.
ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ನಲ್ಲಿ ಸಂಭವಿಸಿದ ಭೂಕಂಪದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಭಾರತ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ, ನಮ್ಮ ಅಧಿಕಾರಿಗಳನ್ನು ಸನ್ನದ್ಧರಾಗಿರಲು ಹೇಳಿದ್ದೇನೆ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿರಲು ಎಂಇಎಗೆ ಕೇಳಿದೆ” ಎಂದು ಅವರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಬರೆದಿದ್ದಾರೆ