ನವದೆಹಲಿ:2025ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಎಕ್ಸ್ನಲ್ಲಿ ವೀಡಿಯೊವನ್ನು ಹಂಚಿಕೊಂಡ ಅವರು, ಹಲವಾರು ಕ್ಷೇತ್ರಗಳಲ್ಲಿ ಛಾಪು ಮೂಡಿಸುತ್ತಿರುವ ಮಹಿಳೆಯರಿಗೆ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳನ್ನು ಹಸ್ತಾಂತರಿಸುವುದಾಗಿ ಘೋಷಿಸಿದರು.
ಮಹಿಳಾ ದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “#WomensDay ರಂದು ನಾವು ನಮ್ಮ ನಾರಿ ಶಕ್ತಿಗೆ ನಮಿಸುತ್ತೇವೆ! ನಮ್ಮ ಸರ್ಕಾರ ಯಾವಾಗಲೂ ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡಿದೆ, ನಮ್ಮ ಯೋಜನೆಗಳು ಮತ್ತು ಕಾರ್ಯಕ್ರಮಗಳಲ್ಲಿ ಪ್ರತಿಬಿಂಬಿಸುತ್ತದೆ. ಇಂದು, ಭರವಸೆ ನೀಡಿದಂತೆ, ನನ್ನ ಸಾಮಾಜಿಕ ಮಾಧ್ಯಮ ಖಾತೆಯನ್ನು ವಿವಿಧ ಕ್ಷೇತ್ರಗಳಲ್ಲಿ ಛಾಪು ಮೂಡಿಸುತ್ತಿರುವ ಮಹಿಳೆಯರು ನಿರ್ವಹಿಸಲಿದ್ದಾರೆ” ಎಂದರು.