ಬೆಂಗಳೂರು : ಮತದಾರರ ಮಾಹಿತಿ ಕದ್ದ ಹಗರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತ್ರವಲ್ಲ ನರೇಂದ್ರ ಮೋದಿ ಸರ್ಕಾರವೂ ಕೂಡ ಭಾಗಿಯಾಗಿದೆ ಎಂದು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಕಿಡಿಕಾರಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಮತದಾರರ ಮಾಹಿತಿ ಕದ್ದ ಹಗರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತ್ರವಲ್ಲ ನರೇಂದ್ರ ಮೋದಿ ಸರ್ಕಾರವೂ ಕೂಡ ಭಾಗಿಯಾಗಿದೆ ಕೇವಲ ಮತದಾರರ ಮಾಹಿತಿ ಕಳವು ಮಾತ್ರವಲ್ಲ ದೇಶ ಹಾಗೂ ರಾಜ್ಯದ ಹಣ ಲೂಟಿ ಮಾಡುತ್ತಿವೆ ವಾಗ್ಧಾಳಿ ನಡೆಸಿದರು.
ಕೇಂದ್ರ ಸರ್ಕಾರದ ಸಿಟಿಜನ್ ಸರ್ವೀಸಸ್ ಸೆಂಟರ್ ನಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದ್ದು, ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಅವರಿಗೂ ಪಾವತಿಯಾಗಿದೆ. ಇದರ ಹಿಂದೆ ಭಾರೀ ದೊಡ್ಡ ಹಗರಣವಿದೆ, ಜನರ ಹಣ ಲೂಟಿ ಮಾಡಿ, ಅವ್ಯವಹಾರ ನಡೆಸಲಾಗಿದೆ, ನರೇಂದ್ರ ಮೋದಿ ಸರ್ಕಾರವೂ ಕೂಡ ಭಾಗಿಯಾಗಿದೆ ಎಂದು ಎಂದು ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಕಿಡಿಕಾರಿದರು.
BREAKING : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಗೆ ಎಸ್ಐಟಿ ನೋಟಿಸ್ಗೆ ಹೈಕೋರ್ಟ್ ತಡೆ