ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 82ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.
ಅಕ್ಟೋಬರ್ 2022 ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಖರ್ಗೆ ಅವರು ಭಾನುವಾರ 82 ನೇ ವರ್ಷಕ್ಕೆ ಕಾಲಿಟ್ಟರು. “ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಶ್ರೀ ಮಲ್ಲಿಕಾರ್ಜುನ ಖರ್ಗೆ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಹೇಳಿದ್ದಾರೆ.
Birthday wishes to Congress President and the Leader of Opposition in the Rajya Sabha, Shri Mallikarjun Kharge Ji. Praying for his long and healthy life. @kharge
— Narendra Modi (@narendramodi) July 21, 2024