ನವದೆಹಲಿ : ಇಂದು ನಾಡಿನಾದ್ಯಂತ ಸಂಭ್ರಮದಿಂದ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಶುಭಾಶಯ ತಿಳಿಸಿರುವ ಪ್ರಧಾನಿ ಮೋದಿ ಅವರು, ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭಾಶಯಗಳು.
ಎಲ್ಲರಿಗೂ ಅಪರಿಮಿತ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲೂ ನಿಮಗೆ ಸಂತೋಷವನ್ನು ತರಲಿ ಎಂದು ಶುಭ ಹಾರೈಸಿದ್ದಾರೆ.
ಎಲ್ಲರಿಗೂ ಯುಗಾದಿಯ ಶುಭಾಶಯಗಳು! pic.twitter.com/P0tL19AZ9D
— Narendra Modi (@narendramodi) April 9, 2024