ನವದೆಹಲಿ: ಬಿಎಸ್ಎಫ್ ಮತ್ತು ಸಿಆರ್ಪಿಎಫ್ ತುಕಡಿಗಳಲ್ಲಿ ದೇಶೀಯ ಶ್ವಾನಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮನ್ ಕಿ ಬಾತ್ ನ 127 ನೇ ಸಂಚಿಕೆಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಐದು ವರ್ಷಗಳ ಹಿಂದೆ ಭಾರತೀಯ ಶ್ವಾನ ತಳಿಗಳನ್ನು ಉಲ್ಲೇಖಿಸಿದ್ದನ್ನು ನೆನಪಿಸಿಕೊಂಡರು ಮತ್ತು ಬಿಎಸ್ಎಫ್ ಮತ್ತು ಸಿಆರ್ಪಿಎಫ್ ಭಾರತೀಯ ತಳಿಯ ನಾಯಿಗಳ ಬಳಕೆಯನ್ನು ಹೆಚ್ಚಿಸಿವೆ ಎಂದು ಸಂತಸ ವ್ಯಕ್ತಪಡಿಸಿದರು.
“ಐದು ವರ್ಷಗಳ ಹಿಂದೆ, ನಾನು ಈ ಕಾರ್ಯಕ್ರಮದಲ್ಲಿ ಭಾರತೀಯ ತಳಿಯ ನಾಯಿಗಳ ಬಗ್ಗೆ ಚರ್ಚಿಸಿದ್ದೆ. ಬಿಎಸ್ಎಫ್ ಮತ್ತು ಸಿಆರ್ಪಿಎಫ್ ತಮ್ಮ ತುಕಡಿಗಳಲ್ಲಿ ಭಾರತೀಯ ತಳಿಯ ಶ್ವಾನಗಳ ಸಂಖ್ಯೆಯನ್ನು ಹೆಚ್ಚಿಸಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತಿದೆ. ನಾಯಿಗಳಿಗಾಗಿ ಬಿಎಸ್ಎಫ್ನ ರಾಷ್ಟ್ರೀಯ ತರಬೇತಿ ಕೇಂದ್ರವು ಗ್ವಾಲಿಯರ್ನ ತೇಕನ್ಪುರದಲ್ಲಿದೆ. ಇಲ್ಲಿ ಉತ್ತರ ಪ್ರದೇಶದ ರಾಂಪುರ್ ಹೌಂಡ್ ಮತ್ತು ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಧೋಲ್ ಹೌಂಡ್ ಗೆ ವಿಶೇಷ ಗಮನ ನೀಡಲಾಗುತ್ತಿದೆ. ಬೆಂಗಳೂರಿನ ಸಿಆರ್ಪಿಎಫ್ನ ಶ್ವಾನ ಸಂತಾನೋತ್ಪತ್ತಿ ಮತ್ತು ತರಬೇತಿ ಶಾಲೆಯಲ್ಲಿ ಭಾರತೀಯ ತಳಿಗಳಾದ ಮಂಗ್ರೆಲ್ಸ್, ಮುಧೋಲ್ ಹೌಂಡ್ಸ್, ಕೊಂಬೈ ಮತ್ತು ಪಾಂಡಿಕೋನಾಗಳಿಗೆ ತರಬೇತಿ ನೀಡಲಾಗುತ್ತಿದೆ ” ಎಂದು ಪ್ರಧಾನಿ ಮೋದಿ ಹೇಳಿದರು.








