ಬೆಂಗಳೂರು: ಮೋದಿಯವರು ಕಾಂಗ್ರೆಸ್ ಮಾಡಿದ ಸಾಲ ತೀರಿಸುತ್ತಿದ್ದಾರೆ ಎಂದು BJP ಭಕ್ತರು, ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಹರಡುತ್ತಿದ್ದಾರೆ. ವಾಸ್ತವವಾಗಿ 2014 ರವರೆಗೆ ಇದ್ದ ದೇಶದ ಒಟ್ಟು ಸಾಲದ ಮೊತ್ತವೇ 76 ಲಕ್ಷ ಕೋಟಿ. ಆದರೆ ಮೋದಿ 8 ವರ್ಷದಲ್ಲಿ 98 ಲಕ್ಷ ಕೋಟಿ ಹೆಚ್ಚವರಿ ಸಾಲ ಮಾಡಿದ್ದಾರೆ. ಹೀಗಿರುವಾಗ ಮೋದಿ ಯಾರ ಸಾಲ ತೀರಿಸುತ್ತಿದ್ದಾರೆ? ಎಂಬುದಾಗಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
4
ಮೋದಿಯವರು ಕಾಂಗ್ರೆಸ್ ಮಾಡಿದ ಸಾಲ ತೀರಿಸುತ್ತಿದ್ದಾರೆ ಎಂದು BJP ಭಕ್ತರು, ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಹರಡುತ್ತಿದ್ದಾರೆ.ವಾಸ್ತವವಾಗಿ 2014 ರವರೆಗೆ ಇದ್ದ ದೇಶದ ಒಟ್ಟು ಸಾಲದ ಮೊತ್ತವೇ 76 ಲಕ್ಷ ಕೋಟಿ.
ಆದರೆ ಮೋದಿ 8 ವರ್ಷದಲ್ಲಿ 98 ಲಕ್ಷ ಕೋಟಿ ಹೆಚ್ಚವರಿ ಸಾಲ ಮಾಡಿದ್ದಾರೆ.
ಹೀಗಿರುವಾಗ ಮೋದಿ ಯಾರ ಸಾಲ ತೀರಿಸುತ್ತಿದ್ದಾರೆ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023
ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಮೋದಿ ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ. ಕಳೆದ 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ ಮಾಡಿದ್ದೇ ಮೋದಿಯವರ ಸಾಧನೆ. UPA ಆಡಳಿತದ ಅಂತ್ಯಕ್ಕೆ ಭಾರತದ ಸಾಲ 63,583 ಕೋಟಿ ಇತ್ತು. ಆದರೆ ಮೋದಿಯವರು ಕೇವಲ 8 ವರ್ಷದಲ್ಲಿ ಸಾಲದ ಪ್ರಮಾಣ 1.40 ಲಕ್ಷ ಕೋಟಿಗೆ ಏರಿಸಿದ್ದಾರೆ. ಈ ಸಾಲ ಮಾಡಿರುವುದು ಯಾರ ಉದ್ಧಾರಕ್ಕೆ? ಎಂದು ಕೇಳಿದ್ದಾರೆ.
1
ಮೋದಿ ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ. ಕಳೆದ 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ ಮಾಡಿದ್ದೇ ಮೋದಿಯವರ ಸಾಧನೆ.UPA ಆಡಳಿತದ ಅಂತ್ಯಕ್ಕೆ ಭಾರತದ ಸಾಲ 63,583 ಕೋಟಿ ಇತ್ತು.
ಆದರೆ ಮೋದಿಯವರು ಕೇವಲ 8 ವರ್ಷದಲ್ಲಿ ಸಾಲದ ಪ್ರಮಾಣ 1.40 ಲಕ್ಷ ಕೋಟಿಗೆ ಏರಿಸಿದ್ದಾರೆ.ಈ ಸಾಲ ಮಾಡಿರುವುದು ಯಾರ ಉದ್ಧಾರಕ್ಕೆ? pic.twitter.com/meQLCB99vu
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023
ಸಾಲ ಮಾಡಿ ತುಪ್ಪ ತಿನ್ನುವಂತೆ ಮೋದಿ ಆಡಳಿತದಲ್ಲಿ ಗೊತ್ತು ಗುರಿಯಿಲ್ಲದೆ ಸಾಲ ಮಾಡಲಾಗಿದೆ. ಈ ಸಾಲದಲ್ಲಿ ತುಪ್ಪ ತಿನ್ನುತ್ತಿರುವವರು ಯಾರು ಎಂಬುದೇ ಯಕ್ಷ ಪ್ರಶ್ನೆ? GDP ಕುಸಿದಿದೆ. ಅಭಿವೃದ್ಧಿ ಶೂನ್ಯವಾಗಿದೆ. ಹಾಗಾದರೆ ಆ ಸಾಲ ಎಲ್ಲಿಗೆ ಖರ್ಚಾಗುತ್ತಿದೆ. #PMCares ನಂತೆ ಯಾವುದಾದರೂ ಉಂಡೆನಾಮದ ಸ್ಕೀಮ್ಗೆ ಹಣ ಎಂದು ವಾಗ್ಧಾಳಿ ನಡೆಸಿದ್ದಾರೆ.
2
ಸಾಲ ಮಾಡಿ ತುಪ್ಪ ತಿನ್ನುವಂತೆ ಮೋದಿ ಆಡಳಿತದಲ್ಲಿ ಗೊತ್ತು ಗುರಿಯಿಲ್ಲದೆ ಸಾಲ ಮಾಡಲಾಗಿದೆ.
ಈ ಸಾಲದಲ್ಲಿ ತುಪ್ಪ ತಿನ್ನುತ್ತಿರುವವರು ಯಾರು ಎಂಬುದೇ ಯಕ್ಷ ಪ್ರಶ್ನೆ?GDP ಕುಸಿದಿದೆ.
ಅಭಿವೃದ್ಧಿ ಶೂನ್ಯವಾಗಿದೆ.
ಹಾಗಾದರೆ ಆ ಸಾಲ ಎಲ್ಲಿಗೆ ಖರ್ಚಾಗುತ್ತಿದೆ.#PMCares ನಂತೆ ಯಾವುದಾದರೂ ಉಂಡೆನಾಮದ ಸ್ಕೀಮ್ಗೆ ಹಣ ಬಳಕೆಯಾಗುತ್ತಿದೆಯೆ?— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023
ಮನ್ಮೋಹನ್ ಸಿಂಗ್ ಸರ್ಕಾರವಿದ್ದಾಗ ಜನರಿಗೆ ಗ್ಯಾಸ್ ಸಬ್ಸಿಡಿ, ರಸಗೊಬ್ಬರ ಸಬ್ಸಿಡಿ, ತೈಲಗಳ ಮೇಲೆ ಅತಿಕಡಿಮೆ ತೆರಿಗೆ ಹಾಗೂ ಅಬಕಾರಿ ಸುಂಕ ವಿಧಿಸಲಾಗುತಿತ್ತು. ಅಷ್ಟಾದರೂ ದೇಶದ ಸಾಲ 76 ಲಕ್ಷ ಕೋಟಿ ದಾಟಿರಲಿಲ್ಲ. ಈ ಸರ್ಕಾರದಲ್ಲಿ ಬಹುತೇಕ ಸಬ್ಸಿಡಿಗಳು ರದ್ದಾಗಿವೆ. ತೈಲಗಳ ಮೇಲೆ ವಿಪರೀತ ಎನ್ನುವಷ್ಟು ತೆರಿಗೆ ವಿಧಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
3
ಮನ್ಮೋಹನ್ ಸಿಂಗ್ ಸರ್ಕಾರವಿದ್ದಾಗ ಜನರಿಗೆ ಗ್ಯಾಸ್ ಸಬ್ಸಿಡಿ, ರಸಗೊಬ್ಬರ ಸಬ್ಸಿಡಿ, ತೈಲಗಳ ಮೇಲೆ ಅತಿಕಡಿಮೆ ತೆರಿಗೆ ಹಾಗೂ ಅಬಕಾರಿ ಸುಂಕ ವಿಧಿಸಲಾಗುತಿತ್ತು.ಅಷ್ಟಾದರೂ ದೇಶದ ಸಾಲ 76 ಲಕ್ಷ ಕೋಟಿ ದಾಟಿರಲಿಲ್ಲ.
ಈ ಸರ್ಕಾರದಲ್ಲಿ ಬಹುತೇಕ ಸಬ್ಸಿಡಿಗಳು ರದ್ದಾಗಿವೆ. ತೈಲಗಳ ಮೇಲೆ ವಿಪರೀತ ಎನ್ನುವಷ್ಟು ತೆರಿಗೆ ವಿಧಿಸಲಾಗುತ್ತಿದೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023