Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂಜಾನೆಯ `ಲೈಂಗಿಕ ಕ್ರಿಯೆ ನಡೆಸುವುದು ಕೇವಲ ಸುಖವಲ್ಲ, ಆರೋಗ್ಯಕ್ಕೂ ಇದು ವರದಾನ!

02/04/2026 6:24 PM

‘ಇರಾನ್ ವಿರುದ್ಧದ ಸುದೀರ್ಘ ಯುದ್ಧಕ್ಕೆ ಅಮೆರಿಕನ್ನರಲ್ಲಿ ತಾಳ್ಮೆಯಿಲ್ಲ’: ಯುದ್ಧದ ಅನಿಶ್ಚಿತತೆ ಬಗ್ಗೆ ಡೊನಾಲ್ಡ್ ಟ್ರಂಪ್ ಪರೋಕ್ಷ ಒಪ್ಪಿಗೆ!

02/04/2026 6:16 PM

ರಕ್ಷಣಾ ರಫ್ತಿನಲ್ಲಿ ಭಾರತದ ದಾಖಲೆಯ ಜಿಗಿತ: 38,424 ಕೋಟಿ ರೂ. ತಲುಪಿದ ರಕ್ಷಣಾ ರಫ್ತು !

02/04/2026 6:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕಕ್ಕೆ ಪ್ರಧಾನಿ ಮೋದಿ ಚೊಂಬು ಕೊಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!
KARNATAKA

ಕರ್ನಾಟಕಕ್ಕೆ ಪ್ರಧಾನಿ ಮೋದಿ ಚೊಂಬು ಕೊಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!

By kannadanewsnow0721/04/2024 2:04 PM

ಕೋಲಾರ: ಕೋಲಾರ (ಬಂಗಾರಪೇಟೆ) ಯ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಭಾಷಣದ ಹೈಲೈಟ್ಸ್ ಹೀಗಿದೆ

ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದರೆ

ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ ಎಂದು ಸಿಎಂ ಪ್ರಶ್ನಿಸಿದರು

ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ?

ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ?

ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಅಲ್ವಾ ದೇವೇಗೌಡರೇ ಎಂದು ಸಿ.ಎಂ ಪ್ರಶ್ನಿಸಿದರು

ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸವನ್ನು ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15 ನೇ ಹಣಕಾಸು ಆಯೋಗದಲ್ಲಿ‌ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದು ಸವಾಲು ಹಾಕಿದರು

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ಘೋಷಿಸಿದ್ದ ದೇವೇಗೌಡರು ಈಗ ಮೋದಿ ಮತ್ತು ತಾವು ಭಾಯಿ ಭಾಯಿ ಎನ್ನುತ್ತಿದ್ದಾರೆ. ಈಗ ಇದೇ ದೇವೇಗೌಡರು ಮೋದಿಯವರ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಎನ್ನುತ್ತಿದ್ದಾರೆ. ಆದ್ದರಿಂದ ಕೋಲಾರದಲ್ಲಿ ದೇವೇಗೌಡರು ಮತ್ತು ಮೋದಿಯವರ ಖಾಲಿ ಚೊಂಬನ್ನು ಸೋಲಿಸಿ ನಮ್ಮ ಗ್ಯಾರಂಟಿಗಳಿಗೆ ಆಶೀರ್ವದಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸಿ ಎಂದು ಸಿ.ಎಂ ಕರೆ ನೀಡಿದರು

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೌತಮ್ ಗೆಲುವು ನಿಶ್ಚಿತವಾಗಿದೆ. ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಬಹುಮತ ನೀಡಿ ಶಾಸಕ ನಾರಾಯಣಸ್ವಾಮಿಯವರಿಗೆ ಹೆಚ್ಚಿನ ಶಕ್ತಿ ನೀಡಿ ಮೋದಿಯವರು ನಿಮ್ಮ ಅಕೌಂಟಿಗೆ 15 ಲಕ್ಷ ಹಾಕ್ತೀನಿ ಎಂದಿದ್ದರಲ್ಲಾ , ಎಷ್ಟು ಹಣ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು

ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದಿದ್ದರಲ್ಲಾ , ಎಷ್ಟು ಜನರಿಗೆ ನೇಮಕಾತಿ ಆದೇಶ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು

ಮೋದಿಯವರು ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದರಲ್ಲಾ , ಎಷ್ಟು ರೈತರಿಗೆ ದುಪ್ಪಟ್ಟು ಹಣ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು

…ಹೀಗಾಗಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಕೈಗೆ ಅವರ ಖಾಲಿಚೊಂಬನ್ನು ಅವರಿಗೇ ವಾಪಾಸ್ ಕೊಡಿ ಎಂದು ಕರೆ ನೀಡಿದರು.

Pm Modi has given a befitting reply to Karnataka: Siddaramaiah on Centre ಕರ್ನಾಟಕಕ್ಕೆ ಪ್ರಧಾನಿ ಮೋದಿ ಚೊಂಬು ಕೊಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!
Share. Facebook Twitter LinkedIn WhatsApp Email

Related Posts

ಮುಂಜಾನೆಯ `ಲೈಂಗಿಕ ಕ್ರಿಯೆ ನಡೆಸುವುದು ಕೇವಲ ಸುಖವಲ್ಲ, ಆರೋಗ್ಯಕ್ಕೂ ಇದು ವರದಾನ!

02/04/2026 6:24 PM1 Min Read

ಸ್ವ-ಉದ್ಯೋಗಾಕಾಂಕ್ಷಿ ಯುವಕರ ಗಮನಕ್ಕೆ: ಉಚಿತ ‘ದ್ವಿಚಕ್ರ ವಾಹನ ರಿಪೇರಿ’ ತರಬೇತಿಗೆ ಅರ್ಜಿ ಆಹ್ವಾನ!

02/04/2026 6:00 PM1 Min Read

ಮಹಿಳೆಯರೇ ಗಮನಕ್ಕೆ: ಟೈಲರಿಂಗ್ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

02/04/2026 5:35 PM1 Min Read
Recent News

ಮುಂಜಾನೆಯ `ಲೈಂಗಿಕ ಕ್ರಿಯೆ ನಡೆಸುವುದು ಕೇವಲ ಸುಖವಲ್ಲ, ಆರೋಗ್ಯಕ್ಕೂ ಇದು ವರದಾನ!

02/04/2026 6:24 PM

‘ಇರಾನ್ ವಿರುದ್ಧದ ಸುದೀರ್ಘ ಯುದ್ಧಕ್ಕೆ ಅಮೆರಿಕನ್ನರಲ್ಲಿ ತಾಳ್ಮೆಯಿಲ್ಲ’: ಯುದ್ಧದ ಅನಿಶ್ಚಿತತೆ ಬಗ್ಗೆ ಡೊನಾಲ್ಡ್ ಟ್ರಂಪ್ ಪರೋಕ್ಷ ಒಪ್ಪಿಗೆ!

02/04/2026 6:16 PM

ರಕ್ಷಣಾ ರಫ್ತಿನಲ್ಲಿ ಭಾರತದ ದಾಖಲೆಯ ಜಿಗಿತ: 38,424 ಕೋಟಿ ರೂ. ತಲುಪಿದ ರಕ್ಷಣಾ ರಫ್ತು !

02/04/2026 6:04 PM

ಆಮ್ ಆದ್ಮಿ ಪಕ್ಷದಲ್ಲಿ ಬಿರುಕು? ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ರಾಘವ್ ಚಡ್ಡಾ ಔಟ್; ಅಶೋಕ್ ಮಿತ್ತಲ್‌ಗೆ ಒಲಿದ ಪಟ್ಟ!

02/04/2026 6:00 PM
State News
KARNATAKA

ಮುಂಜಾನೆಯ `ಲೈಂಗಿಕ ಕ್ರಿಯೆ ನಡೆಸುವುದು ಕೇವಲ ಸುಖವಲ್ಲ, ಆರೋಗ್ಯಕ್ಕೂ ಇದು ವರದಾನ!

By kannadanewsnow5702/04/2026 6:24 PM KARNATAKA 1 Min Read

ದಿನದ ಆರಂಭ ಉತ್ತಮವಾಗಿದ್ದರೆ ಇಡೀ ದಿನ ಉತ್ಸಾಹದಿಂದ ಇರಲು ಸಾಧ್ಯ ಎಂಬ ಮಾತಿದೆ. ಇತ್ತೀಚಿನ ಸಂಶೋಧನೆಗಳ ಪ್ರಕಾರ, ಮುಂಜಾನೆಯ ಶಾರೀರಿಕ…

ಸ್ವ-ಉದ್ಯೋಗಾಕಾಂಕ್ಷಿ ಯುವಕರ ಗಮನಕ್ಕೆ: ಉಚಿತ ‘ದ್ವಿಚಕ್ರ ವಾಹನ ರಿಪೇರಿ’ ತರಬೇತಿಗೆ ಅರ್ಜಿ ಆಹ್ವಾನ!

02/04/2026 6:00 PM

ಮಹಿಳೆಯರೇ ಗಮನಕ್ಕೆ: ಟೈಲರಿಂಗ್ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

02/04/2026 5:35 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಏ.5ರಂದು ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

02/04/2026 5:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.