ಶಿವಮೊಗ್ಗ : ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜಕುಮಾರ್ ಅವರ ಪರವಾಗಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಯಾಚನೆ ಮಾಡಿದರು ಅಲ್ಲದೆ ಇವಂದು ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಯುವಕರಿಗೆ ಪ್ರಧಾನಿ ಮೋದಿ ಅವರು ತಿರುಪತಿ ಟೋಪಿ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಶಿವಮೊಗ್ಗದಲ್ಲಿ ಹಮ್ಮಿಕೊಂಡಂತಹ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಯುವಕರಿಗೆ ಪ್ರಧಾನಮಂತ್ರಿ ಮೋದಿ ತಿರುಪತಿ ಟೋಪಿ ಹಾಕಿದ್ದಾರೆ ಎಂದು ಸಿಎಂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು ಮೋದಿ ಸರ್ಕಾರ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ತಿಳಿಸಿದರು.
ರಾಜ್ಯದ ಬಿಜೆಪಿ ಸಂಸದರು ಲೋಕಸಭೆಯಲ್ಲಿ ಬಾಯಿ ಬಿಡಲಿಲ್ಲ. ಬಿ ವೈ ರಾಘವೇಂದ್ರ ಸಹ ಲೋಕಸಭೆಯಲ್ಲಿ ರಾಜ್ಯದ ಬಗ್ಗೆ ಮಾತನಾಡಿಲ್ಲ. ತೆರಿಗೆಯಲ್ಲೂ ಕೂಡ ಕೇಂದ್ರ ಸರ್ಕಾರದಿಂದ ನಮಗೆ ಅನ್ಯಾಯವಾಗಿದೆ.ಭದ್ರಾ ಯೋಜನೆಗೆ ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಕೂಡ ಬಂದಿಲ್ಲ ಎಂದರು.
ಪರಿಹಾರ ಬಿಡುಗಡೆ ಮಾಡದಿದ್ದಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೆವು. ಕೇಂದ್ರ ಸರ್ಕಾರ 3400 ಕೋಟಿ ಮಾತ್ರ ಬರ ಪರಿಹಾರ ನೀಡಿದೆ. ಮೋದಿ ರಾಜ್ಯಕ್ಕೆ ದೊಡ್ಡ ಅನ್ಯಾಯ ಮಾಡಿದ್ದಾರೆ ಎಂದು ಶಿವಮೊಗ್ಗ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.