ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಹೃದಯದಲ್ಲಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ನನ್ನ ಹೃದಯದಲ್ಲಿದ್ದಾರೆ. ನನಗೆ ತುಂಬಾ ಸಂತೋಷ ಆಗಿದೆ. ಮೋದಿ ಫೋಟೋ ಬಳಸಿದ್ದಕ್ಕೆ ಬಿಜೆಪಿ ಕೋರ್ಟ್ ಮೊರೆ ಹೋಗಿತ್ತು ಕೋರ್ಟ್ ಮತ್ತು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿತ್ತು. ಆದರೆ ಮೋದಿ ಫೋಟೋ ಬಳಕೆಗೆ ನನಗೆ ಅವಕಾಶ ಸಿಕ್ಕಿದೆ. ಇದರಿಂದ ಬಿಜೆಪಿಗೆ ಎರಡೂ ಕಡೆ ಹಿನ್ನಡೆ ಆಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ನನ್ನ ಹೃದಯದಲ್ಲಿದ್ದಾರೆ. ಮೋದಿ ಆದರ್ಶ ನನಗೆ ಮಾರ್ಗದರ್ಶನ, ಚುನಾವಣೆ ಗೆಲ್ಲಲು ಮೋದಿ ಫೋಟೋ ಅನುಕೂಲವಾಗಲಿದೆ. ಈ ಬಾರಿ ಗೆದ್ದು ಮೋದಿ ಕೈ ಬಲಪಡಿಸುತ್ತೇನ ಎಂದು ಹೇಳಿದ್ದಾರೆ.

Share.
Exit mobile version