ಮುಂಬೈ: ‘ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮಮಂದಿರದ ವಿಚಾರದಲ್ಲಿ ಬುಲ್ಡೋಜರ್ ಪ್ರಯೋಗಿಸುತ್ತವೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಬಿಜೆಪಿ ಪಕ್ಷ ಜನರನ್ನು ಪ್ರಚೋದಿಸುತ್ತಿದೆ’ ಮತ್ತು ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಹಾರಾಷ್ಟ್ರದ “ಅಕ್ರಮ” ಮಹಾಯುತಿ ಸರ್ಕಾರವನ್ನು ಪ್ರಧಾನಿ ಮೋದಿ ಬೆಂಬಲಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. “ನಾವು ಇಲ್ಲಿಯವರೆಗೆ ಬುಲ್ಡೋಜರ್ಗಳನ್ನು ಬಳಸಿಲ್ಲ… ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಸ್ವತಃ ಪ್ರಧಾನಿಯೇ ಇದನ್ನು ಮಾಡುತ್ತಿದ್ದಾರೆ. ಅವರು ಜನರನ್ನು ಪ್ರಚೋದಿಸುತ್ತಿದ್ದಾರೆ. ನಮ್ಮ ಸರ್ಕಾರ ಬಂದ ನಂತರ, ನಮ್ಮ ಸಂವಿಧಾನದ ಪ್ರಕಾರ ಎಲ್ಲವನ್ನೂ ರಕ್ಷಿಸಲಾಗುವುದು, ನಾವು ಸಂವಿಧಾನವನ್ನು ಅನುಸರಿಸುತ್ತೇವೆ” ಎಂದು ಖರ್ಗೆ ಸುದ್ದಿಗಾರರಿಗೆ ತಿಳಿಸಿದರು.