ನವದೆಹಲಿ: ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಮತ್ತು ಭಾರತೀಯ ಉದ್ಯಮಿ ಸೈರಸ್ ಮಿಸ್ತ್ರಿಯವರು ( former Tata Sons chairman and Indian business tycoon Cyrus Mistry ) ಇಂದು ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಸಂತಾಪ ಸೂಚಿಸಿದ್ದಾರೆ.
2029ರ ವೇಳೆಗೆ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಎಸ್ಬಿಐ ವರದಿ
ಈ ಬಗ್ಗೆ ಟ್ವಿಟ್ ( Twitter ) ಮಾಡಿರುವಂತ ಅವರು, ಶ್ರೀ ಸೈರಸ್ ಮಿಸ್ತ್ರಿ ಅವರ ಅಕಾಲಿಕ ನಿಧನ ಆಘಾತಕಾರಿಯಾಗಿದೆ. ಅವರು ಭಾರತದ ಆರ್ಥಿಕ ಪರಾಕ್ರಮದಲ್ಲಿ ನಂಬಿಕೆಯಿಟ್ಟ ಭರವಸೆಯ ಉದ್ಯಮಿ ನಾಯಕರಾಗಿದ್ದರು. ಅವರ ನಿಧನವು ವಾಣಿಜ್ಯ ಮತ್ತು ಕೈಗಾರಿಕಾ ಜಗತ್ತಿಗೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.
The untimely demise of Shri Cyrus Mistry is shocking. He was a promising business leader who believed in India’s economic prowess. His passing away is a big loss to the world of commerce and industry. Condolences to his family and friends. May his soul rest in peace.
— Narendra Modi (@narendramodi) September 4, 2022
ಇಂದು ಅಹಮದಾಬಾದ್ನಿಂದ ಮುಂಬೈಗೆ ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಪ್ರಯಾಣಿಸುತ್ತಿದ್ದಾಗ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಮರ್ಸಿಡಿಸ್ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ನಾಲ್ಕು ಜನರು ಇದ್ದಾರೆ ಎಂದು ವರದಿಯಾಗಿದೆ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ವೈದ್ಯರು ಸತ್ತಿದ್ದಾರೆ ಎಂದು ಘೋಷಿಸಿದರು. ಮರಣೋತ್ತರ ಪರೀಕ್ಷೆಗಾಗಿ ಅವರ ದೇಹವನ್ನು ಕಾಸಾ ಗ್ರಾಮೀಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
BIG ALEART: ತನ್ನ ಗ್ರಾಹಕರಿಗೆ SBI ನೀಡಿದೆ ಈ ಮಹತ್ವದ ಮಾಹಿತಿ, ಹೀಗೆ ಮಾಡದಂತೆ ಸೂಚನೆ