ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಶೀಘ್ರದಲ್ಲೇ ನಡೆಯಲಿದೆ. ಮತದಾನಕ್ಕೂ ಮುನ್ನ ಕೇಂದ್ರದ ಬಿಜೆಪಿ ಸೇರಿದಂತೆ ಇತರ ಪಕ್ಷಗಳು ರ್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವಲ್ಲಿ ನಿರತವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಪರ ರ್ಯಾಲಿಗಳನ್ನು ನಡೆಸುತ್ತಿದ್ದಾರೆ, ಅದರಲ್ಲಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಸಂವಿಧಾನವನ್ನು ಬದಲಾಯಿಸಲು ಮತ್ತು ದಲಿತ ಮತ್ತು ಒಬಿಸಿ ಕೋಟಾಗಳನ್ನು ತೆಗೆದುಹಾಕಲು ಬಯಸಿದೆ ಅಂತ ಹೇಳಿದ್ದಾರೆ.
ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, “ಅವರು (ಪ್ರತಿಪಕ್ಷಗಳು) ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ, ಅವರಿಗೆ ಮತಗಳಿಗಾಗಿ ಸಮಾಜವನ್ನು ಹೇಗೆ ವಿಭಜಿಸಬೇಕು ಎಂಬುದು ಮಾತ್ರ ತಿಳಿದಿದೆ” ಎಂದು ಹೇಳಿದರು. ಬಂಗಾಳದಲ್ಲಿ, ತೃಣಮೂಲ ಕಾಂಗ್ರೆಸ್ ಶಾಸಕ ಹುಮಾಯೂನ್ ಕಬೀರ್ ಅವರನ್ನು ಉಲ್ಲೇಖಿಸಿದ ಪ್ರಧಾನಿ, “ಟಿಎಂಸಿ ಶಾಸಕರೊಬ್ಬರು ಬಹಿರಂಗ ಬೆದರಿಕೆ ಹಾಕಿದ್ದಾರೆ. ಕೇವಲ ಎರಡು ಗಂಟೆಗಳಲ್ಲಿ ಹಿಂದೂಗಳನ್ನು ಭಾಗೀರಥಿಯಲ್ಲಿ ಮುಳುಗಿಸುವುದಾಗಿ ಅವರು ಹೇಳಿದ್ದಾರೆ ಅಂತ ಕಿಡಿಕಾರಿದರು.