ನವದೆಹಲಿ: ಬಿಜೆಪಿ ಹಿರಿಯ ನಾಯಕ ವಿಜಯ್ ಕುಮಾರ್ ಮಲ್ಹೋತ್ರಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಂತಿಮ ನಮನ ಸಲ್ಲಿಸಿದರು.
ಡಿಸೆಂಬರ್ 1931 ರಲ್ಲಿ ಲಾಹೋರ್ ನಲ್ಲಿ ಜನಿಸಿದ ಮಲ್ಹೋತ್ರಾ ತಮ್ಮ 93 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಇರಿಸಲಾಗಿದೆ, ಅಲ್ಲಿ ಪ್ರಧಾನಿ ಸಂತಾಪ ಸೂಚಿಸಲು ಆಗಮಿಸಿದರು. ನಂತರ ಪಾರ್ಥಿವ ಶರೀರವನ್ನು ದೆಹಲಿ ಬಿಜೆಪಿ ಕಚೇರಿಗೆ ತಂದು ಅಂತಿಮ ನಮನ ಸಲ್ಲಿಸಲಾಗುವುದು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಪಕ್ಷದ ಹಲವಾರು ಹಿರಿಯ ನಾಯಕರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಮಲ್ಹೋತ್ರಾ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದು, ಅವರು ಜನರ ಸಮಸ್ಯೆಗಳ ಬಗ್ಗೆ ಉತ್ತಮ ತಿಳುವಳಿಕೆ ಹೊಂದಿದ್ದ “ಅತ್ಯುತ್ತಮ ನಾಯಕ” ಎಂದು ಕರೆದರು.
ಪ್ರಧಾನಿ ಮೋದಿ ಟ್ವೀಟ್
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ” ವಿಜಯ್ ಕುಮಾರ್ ಮಲ್ಹೋತ್ರಾ ಅವರು ಜನರ ಸಮಸ್ಯೆಗಳ ಬಗ್ಗೆ ಉತ್ತಮ ತಿಳುವಳಿಕೆಯನ್ನು ಹೊಂದಿದ್ದ ಅತ್ಯುತ್ತಮ ನಾಯಕರಾಗಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ದೆಹಲಿಯಲ್ಲಿ ನಮ್ಮ ಪಕ್ಷವನ್ನು ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಸಂಸದೀಯ ಮಧ್ಯಪ್ರವೇಶಕ್ಕಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಬರೆದಿದ್ದಾರೆ.
PM @narendramodi pays tribute to senior BJP leader Vijay Kumar Malhotra, who passed away at AIIMS, New Delhi, and also meets with family members. pic.twitter.com/D0lhD1eT92
— All India Radio News (@airnewsalerts) September 30, 2025







