ನವದೆಹಲಿ : ಭಾರತೀಯ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನದ ಸ್ಮರಣಾರ್ಥ ಪ್ರತೀ ವರ್ಷ ಆಗಸ್ಟ್ 29ರಂದು ʻರಾಷ್ಟ್ರೀಯ ಕ್ರೀಡಾ ದಿನ(National Sports Day)ವನ್ನು ಆಚರಿಸಲಾಗುತ್ತದೆ.
ಈ ವಿಶೇಷ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ. ಧ್ಯಾನ್ ಚಂದ್ ಜನ್ಮ ವಾರ್ಷಿಕೋತ್ಸದ ಸಂದರ್ಭದಲ್ಲಿ ಅವರಿಗೆ ಗೌರವ ಸಲ್ಲಿಸಿದ್ದಾರೆ ಮತ್ತು ಇದೇ ವೇಳೆ, ಇತ್ತೀಚಿನ ವರ್ಷಗಳಲ್ಲಿ ದೇಶಾದ್ಯಂತ ಕ್ರೀಡೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಅದು ಜನಪ್ರಿಯತೆಯನ್ನು ಗಳಿಸಲಿ ಎಂದು ಹಾರೈಸಿದ್ದಾರೆ.
Greetings on National Sports Day and tributes to Major Dhyan Chand Ji on his birth anniversary.
The recent years have been great for sports. May this trend continue. May sports keep gaining popularity across India. pic.twitter.com/g04aqModJT
— Narendra Modi (@narendramodi) August 29, 2022
ಇಂದು ದೇಶಾದ್ಯಂತ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು, ಜನರು ತಮ್ಮ ನೆಚ್ಚಿನ ಕ್ರೀಡೆಯನ್ನು ಆಡಲು ತಮ್ಮ ದಿನದಿಂದ ಸ್ವಲ್ಪ ಸಮಯವನ್ನು ವಿನಿಯೋಗಿಸುವಂತೆ ಪ್ರೋತ್ಸಾಹಿಸಲಾಗುತ್ತದೆ ಮತ್ತು ದೈಹಿಕವಾಗಿ ಮತ್ತು ಮಾನಸಿಕವಾಗಿ ತಮ್ಮನ್ನು ತಾವು ಸದೃಢವಾಗಿರಿಸಿಕೊಳ್ಳಲು ದೈನಂದಿನ ಜೀವನದಲ್ಲಿ ಕ್ರೀಡೆಗಳನ್ನು ಆಡುವ ಅಭ್ಯಾಸವನ್ನು ರೂಢಿಸಿಕೊಳ್ಳಿ.
ಧ್ಯಾನ್ ಚಂದ್ ಅವರು 1928, 1932 ಮತ್ತು 1936 ರ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ವಿಜೇತರಾಗಿದ್ದಾರೆ.
ಪೋಕ್ಸೋ ಕೇಸ್ ತನಿಖೆ ಚುರುಕು: ಅಜ್ಞಾತ ಸ್ಥಳಕ್ಕೆ ತೆರಳಿದ ಮುರುಘಾ ಶ್ರೀ.?
ಐಸ್ ಕ್ರೀಮ್ ಆರ್ಡರ್ ಮಾಡಿದವನಿಗೆ ಸ್ವಿಗ್ಗಿಯಿಂದ ಕಾಂಡೋಮ್ : ಮುಂದೆನಾಯ್ತು ಗೊತ್ತಾ? | ‘Çondom Guy’