ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಮೆಲೋನಿ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಇಟಲಿ ಪ್ರಧಾನಿ ಮೆಲೋನಿ ಜೊತೆ ಪ್ರಧಾನಿ ಮೋದಿ ಸೆಲ್ಫಿಗೆ ಪೋಸ್ ನೀಡಿದ್ದಾರೆ.

ಇಟಲಿಯ ಅಪುಲಿಯಾದಲ್ಲಿ ನಡೆಯುತ್ತಿರುವ ಜಿ 7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಅವರು ಭಾಗಿಯಾಗಿದ್ದರು. ಈ ವೇಳೆ ಇಟಲಿ ಪ್ರಧಾನಿ ಮೆಲೋನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸೆಲ್ಪಿ ಫೋಟೋ ಕ್ಲಿಕ್ಕಿಸಿದ್ದಾರೆ. ಸದ್ಯ ಅವರ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನು ಇನ್ಸ್ಟಾಗ್ರಾಮ್ ಮತ್ತು ಎಕ್ಸ್ ಸೇರಿದಂತೆ ಸಾಮಾಜಿಕ ಮಾಧ್ಯಮ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಜಿ 7 ಔಟ್ರೀಚ್ ಶೃಂಗಸಭೆಗೆ ಮೆಲೋನಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ದಕ್ಷಿಣ ಇಟಲಿಯಲ್ಲಿ ಒಂದು ದಿನ ಪ್ರವಾಸ ಕೈಗೊಂಡಿದ್ದರು.

Share.
Exit mobile version