ನವದೆಹಲಿ: ರಾಮ ಮಂದಿರದಲ್ಲಿ ರಾಮ್ ಲಲ್ಲಾ ಅವರ ಪ್ರಾಣ ಪ್ರತಿಷ್ಠಾಪನೆಗೆ 11 ದಿನಗಳು ಬಾಕಿ ಇರುವಾಗ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಶೇಷ ಆಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಜನವರಿ 22 ರವರೆಗೆ 11 ದಿನಗಳ ವಿಶೇಷ ಆಚರಣೆಗಳನ್ನು ಪ್ರಾರಂಭಿಸುತ್ತಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ.
“ಅಯೋಧ್ಯೆಯಲ್ಲಿ ರಾಮ್ ಲಾಲಾ ಪ್ರತಿಷ್ಠಾಪನೆಗೆ ಕೇವಲ 11 ದಿನಗಳು ಮಾತ್ರ ಉಳಿದಿವೆ. ಈ ಶುಭ ಸಂದರ್ಭಕ್ಕೆ ನಾನೂ ಸಾಕ್ಷಿಯಾಗುತ್ತಿರುವುದು ನನ್ನ ಅದೃಷ್ಟ. ಪ್ರತಿಷ್ಠಾಪನೆಯ ಸಮಯದಲ್ಲಿ ಭಾರತದ ಎಲ್ಲಾ ಜನರನ್ನು ಪ್ರತಿನಿಧಿಸಲು ಭಗವಂತ ನನ್ನನ್ನು ಒಂದು ಸಾಧನವನ್ನಾಗಿ ಮಾಡಿದ್ದಾನೆ. ಇದನ್ನು ಗಮನದಲ್ಲಿಟ್ಟುಕೊಂಡು, ನಾನು ಇಂದಿನಿಂದ 11 ದಿನಗಳ ವಿಶೇಷ ಆಚರಣೆಯನ್ನು ಪ್ರಾರಂಭಿಸುತ್ತಿದ್ದೇನೆ. ನಾನು ಎಲ್ಲಾ ಜನರಿಂದ ಆಶೀರ್ವಾದ ಪಡೆಯುತ್ತಿದ್ದೇನೆ. ಈ ಸಮಯದಲ್ಲಿ, ನನ್ನ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದು ತುಂಬಾ ಕಷ್ಟ, ಆದರೆ ನಾನು ನನ್ನ ಕಡೆಯಿಂದ ಪ್ರಯತ್ನಿಸಿದ್ದೇನೆ” ಎಂದು ಅವರು ಆಡಿಯೊ ಸಂದೇಶವನ್ನು ಹಂಚಿಕೊಳ್ಳುವಾಗ ಹೇಳಿದ್ದಾರೆ.