ನವದೆಹಲಿ: ನಿನ್ನೆ ಫಿರೋಜ್ ಪುರ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪದ ( Prime Minister Narendra Modi’s security lapse ) ತನಿಖೆಗಾಗಿ ಪಂಜಾಬ್ ಸರ್ಕಾರ ( Punjab government ) ಉನ್ನತ ಮಟ್ಟದ ತನಿಖೆಗೆ ಸಮಿತಿಯನ್ನು ( high-level committee to investigate ) ರಚಿಸಿ ಆದೇಶಿಸಿದೆ. ಈ ಸಮಿತಿಯು ಪ್ರಧಾನಿಯವರ ಭದ್ರತೆಯ ಲೋಪದ ಬಗ್ಗೆ ಮೂರು ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.
ಪಂಜಾಬ್ ಸರ್ಕಾರ ನೇಮಿಸಿರುವಂತ ಉತ್ನಮಟ್ಟದ ತನಿಖಾ ಸಮಿತಿಯಲ್ಲಿ ಗೃಹ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿ ನ್ಯಾಯಮೂರ್ತಿ (ನಿವೃತ್ತ) ಮೆಹ್ತಾಬ್ ಸಿಂಗ್ ಗಿಲ್ ಮತ್ತು ನ್ಯಾಯಮೂರ್ತಿ ಅನುರಾಗ್ ವರ್ಮಾ ಅವರನ್ನು ಒಳಗೊಂಡಿರುತ್ತದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
BIGG NEWS : ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ
ಪ್ರತಿಭಟನಾಕಾರರ ದಿಗ್ಬಂಧನದಿಂದಾಗಿ 20 ನಿಮಿಷಗಳ ಕಾಲ ಫ್ಲೈಓವರ್ ನಲ್ಲಿ ಸಿಲುಕಿಕೊಂಡಿದ್ದ ಮೋದಿ ಅವರ ಪಂಜಾಬ್ ಭೇಟಿಯನ್ನು ಬುಧವಾರ ಮೊಟಕುಗೊಳಿಸಲಾಯಿತು. ಇದಕ್ಕೆ ಕಾರಣರಾದವರ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿತ್ತು. ಅಲ್ಲದೇ ತನಿಖೆ ನಡೆಸುವಂತೆಯೂ ತಿಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪಂಜಾಬ್ ಸರ್ಕಾರ ಈಗ ಉನ್ನತ ಮಟ್ಟದ ತನಿಖೆಗೆ ಸಮಿತಿಯನ್ನು ರಚಿಸಿ, ವರದಿಯನ್ನು 3 ದಿನಗಳಲ್ಲಿ ಸಲ್ಲಿಸುವಂತೆ ಸೂಚಿಸಿದೆ.
‘ಓಮಿಕ್ರಾನ್’ ಬಗ್ಗೆ ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆರೋಗ್ಯ ಸಚಿವರು: ಏನದು ಗೊತ್ತಾ.?