ಬೆಂಗಳೂರು: 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ರೇವಣ್ಣ ಅವರನ್ನು ಬೆಂಬಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಸಂಸ್ಥೆಯೊಂದರ ವರದಿಗಾರರೊಂದಿಗೆ ಮಾತನಾಡಿದ ಅವರು, “400 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ರೇವಣ್ಣ ಪ್ರಕರಣ ಇಲ್ಲಿ ದೊಡ್ಡ ವಿಷಯವಾಗಿದೆ ಮತ್ತು ಅವರನ್ನ ಪ್ರಧಾನಿ ಮೋದಿ ಅನುಮೋದಿಸಿದ್ದಾರೆ. ಮೊದಲು ಪ್ರಧಾನಿ ಮೋದಿ ಮಹಿಳೆಯರ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.
ಏಪ್ರಿಲ್ 26 ರಂದು ಮತದಾನ ನಡೆದ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಅವರು ಎನ್ಡಿಎ ಅಭ್ಯರ್ಥಿಯಾಗಿದ್ದರು. ಸಧ್ಯ ಜೆಡಿಎಸ್ ಎನ್ಡಿಎಗೆ ಸೇರ್ಪಡೆಯಾಗಿದೆ.
“ಪ್ರಧಾನಿ ಭಾರತದ ತಾಯಂದಿರು ಮತ್ತು ಸಹೋದರಿಯರ ಕ್ಷಮೆಯಾಚಿಸಬೇಕು. ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿದ್ದಾರೆ. ಇದು ಲೈಂಗಿಕ ಹಗರಣವಲ್ಲ, ಸಾಮೂಹಿಕ ಅತ್ಯಾಚಾರ” ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷರು ಆರೋಪಿಸಿದರು.
ಚಾಮರಾಜಪೇಟೆಯ ಪಶು ಆಸ್ಪತ್ರೆ ಭೂಮಿಯನ್ನು ‘ವಕ್ಫ್ ಬೋರ್ಡ್’ ಗೆ ಕೊಟ್ಟ ಸರ್ಕಾರಿ ಆದೇಶಕ್ಕೆ ಹೈಕೋರ್ಟ್ ತಡೆ
BREAKING: ಕರ್ನಾಟದ 6 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂ.3ರಂದು ಮತದಾನ, ಜೂ.6ಕ್ಕೆ ಫಲಿತಾಂಶ ಪ್ರಕಟ