ಬೆಂಗಳೂರು: ರಾಮಲಲ್ಲಾ ಮೂರ್ತಿ ಕಾರ್ಯಕ್ರಮದಲ್ಲಿ ಮೋದಿಯನ್ನು ‘ಗರ್ಭಗುಡಿ’ಗೆ ಬಿಡಬಾರದಿತ್ತು ಅಂತ ಮಾಜಿ ಸಿಎಂ ಸಿಎಂ ವೀರಪ್ಪ ಮೊಯ್ಲಿ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.
ಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ (Congress) ವತಿಯಿಂದ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ನಿಜವಾದ ಬ್ರಾಹ್ಮಣರು-ಸ್ವಾಮೀಜಿಗಳು ಆಗಿದ್ರೆ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಹೇಳಿರುವುದು ಈಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ನರೇಂದ್ರ ಮೋದಿ ಗರ್ಭಗುಡಿಗೆ ಪ್ರವೇಶ ಮಾಡಿದ್ದೇ ತಪ್ಪು, ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ಸಹ ತಪ್ಪು, ನಿಜವಾದ ಸ್ವಾಮೀಜಿಗಳು, ಬ್ರಾಹ್ಮಣರು ಆಗಿದ್ರೆ ನರೇಂದ್ರ ಮೋದಿಯನ್ನ ಗರ್ಭಗುಡಿ ಒಳಗೆ ಬಿಡಬಾರದಿತ್ತು ಅಂತ ವಾಗ್ದಾಳಿ ನಡೆಸಿದರು. ಇದೇ ವೇಳೆ ಅವರು ಇನ್ನೂ ರಾಮಮಂದಿರ ಅಪೂರ್ಣ ಮಂದಿರ. ಕೇವಲ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಮಾಡಿದ್ರೆ ಸಾಲದು. ಅಲ್ಲಿ ರಾಮ ಲಕ್ಷಣ, ಸೀತಾ ಹಾಗೂ ಆಂಜನೇಯನ ವಿಗ್ರಹಗಳು ಇರಬೇಕು ಆಗಲೇ ರಾಮಮಂದಿರ ಪೂರ್ಣ ಆಗೋದು ಅಂತ ತಿಳಿಸಿದರು.