ತಮಿಳುನಾಡು : ಮರು ವಿಂಗಡಣೆಯಿಂದ ಕ್ಷೇತ್ರಗಳನ್ನು ಕಳೆದುಕೊಳ್ಳುವ ಭೀತಿ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಎಂ ಕೆ ಸ್ಟಾಲಿನ್ ಮಾತನಾಡಿ 1971ರ ಜನಗಣತಿ ಆಧರಿಸಿ ಕ್ಷೇತ್ರ ಪುನರ್ ವಿಂಗಡಣೆ ಮಾಡಲಿ. ಪ್ರಧಾನಿಯವರು ಈ ಬಗ್ಗೆ ಭರವಸೆ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಗ್ರಹಿಸಿದ್ದಾರೆ.
ಮರು ವಿಂಗಡಣೆಯಿಂದ ಕ್ಷೇತ್ರಗಳನ್ನು ಕಳೆದುಕೊಳ್ಳುವ ಭೀತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಸರ್ವಪಕ್ಷಗಳ ತುರ್ತು ಸಭೆ ಕರೆದಿದ್ದರು. ಸಭೆಯಲ್ಲಿ ಕ್ಷೇತ್ರ ವಿಂಗಡಣೆಯ ವಿಷಯ ಕುರಿತು ಜನರಿಗೆ ಜಾಗೃತಿ ಮೂಡಿಸುತ್ತೇವೆ. ಹೋರಾಟಕ್ಕೆ ದಕ್ಷಿಣ ಭಾರತದ ಜಂಟಿ ಕ್ರಿಯಾ ಸಮಿತಿ ರಚಿಸುತ್ತೇವೆ. ಕ್ಷೇತ್ರಗಳ ಸಂಖ್ಯೆ ಹೆಚ್ಚಿಸಿದರೆ ನಮಗೆ 22 ಹೆಚ್ಚುವರಿ ಸ್ಥಾನ ಸಿಗಬೇಕು ಎಂದು ಅವರು ತಿಳಿಸಿದರು.
ಪ್ರಸ್ತುತ ಜನಸಂಖ್ಯಾ ಪ್ರಕಾರ ಕೇವಲ 10 ಹೆಚ್ಚುವರಿ ಸ್ಥಾನಗಳು ಸಿಗುತ್ತವೆ ಅಂದರೆ ನಾವು 12 ಸ್ಥಾನಗಳನ್ನು ಕಳೆದುಕೊಳ್ಳುತ್ತೇವೆ. ತಮಿಳುನಾಡಿನ ರಾಜಕೀಯ ಪ್ರಾತಿನಿಧ್ಯದ ಮೇಲೆ ನೇರ ದಾಳಿಯಾಗಿದೆ. ತಮಿಳುನಾಡಿನ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ನಾವು ಕ್ಷೇತ್ರ ಪುನರ್ ವಿಂಗಡಣೆಯನ್ನು ವಿರೋಧ ಮಾಡುವುದಿಲ್ಲ ಕಳೆದ 50 ವರ್ಷಗಳಲ್ಲಿ ಸಾಮಾಜಿಕ ಯೋಜನೆ ಜಾರಿಗೆ ತಂದಿದ್ದೇವೆ. 2026 ರ ಜನಗಣತಿ ಆಧಾರದ ಮೇಲೆ ಪುನರ್ ವಿಂಗಡಣೆ ಆಗಬಾರದು ಎಂದು ಸೌರ ಪಕ್ಷ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆಗ್ರಹಿಸಿದ್ದಾರೆ.