ಫ್ರಾನ್ಸ್ನಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯ ಚಿತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹಂಚಿಕೊಂಡಿದ್ದಾರೆ. ಅವುಗಳಲ್ಲಿ ಒಂದು ಚಿತ್ರದಲ್ಲಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಂತಹ ಜಾಗತಿಕ ನಾಯಕರೊಂದಿಗೆ ಪೋಸ್ ನೀಡುತ್ತಿರುವುದು ಕಂಡುಬಂದಿದೆ.
”ಎವಿಯನ್ನಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯಲ್ಲಿ ಸಹವರ್ತಿ ನಾಯಕರೊಂದಿಗೆ. ಸಮೃದ್ಧಿ, ಸುಸ್ಥಿರತೆ ಮತ್ತು ಮಾನವ ಕಲ್ಯಾಣವನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ,” ಎಂದು ಪ್ರಧಾನಿ ಮೋದಿ ಈ ಪೋಸ್ಟ್ಗೆ ಶೀರ್ಷಿಕೆ (ಕ್ಯಾಪ್ಶನ್) ನೀಡಿದ್ದಾರೆ.
ಜಿ-7 ಶೃಂಗಸಭೆಯ ಬಿಡುವಿನ ವೇಳೆಯಲ್ಲಿ ಪ್ರಧಾನಿ ಮೋದಿ ಅವರು ಟ್ರಂಪ್ ಅವರೊಂದಿಗೆ ಸಂವಹನ ನಡೆಸುತ್ತಿರುವುದೂ ಕಂಡುಬಂದಿದೆ. ಭಾರತ ಮತ್ತು ಅಮೆರಿಕ ನಡುವೆ ಮಾತುಕತೆ ಹಂತದಲ್ಲಿರುವ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ಉಭಯ ನಾಯಕರ ಈ ಭೇಟಿಯು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.








