ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಇದೀಗ ಪ್ರಧಾನಿ ಮೋದಿ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಬಳಿಯಲ್ಲಿನ ವಿಶ್ವದ ಅತಿ ಎತ್ತರದವಾದ 108 ಅಡಿ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದು, ಬಳಿಕ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಕೆಲವೇ ಕ್ಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ, ಸಭೆಯಲ್ಲಿ ಸಿಎಂ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲನಾಂದನಾಥಮಹಾ ಸ್ವಾಮೀಜಿ ಮತ್ತಿತರರಿದ್ದಾರೆ. ಪ್ರಧಾನಿ ಮೋದಿ ಸಮಾವೇಶಕ್ಕೆ ಲಕ್ಷಾಂತರ ಜನರು ಭಾಗಿಯಾಗಿದ್ದಾರೆ.
Live : ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಶ್ರೀ @narendramodi #KarnatakaWelcomesModi https://t.co/h63matRpjN
— BJP Karnataka (@BJP4Karnataka) November 11, 2022