ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಮೊದಲಿಗೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ್ ಮೋದಿ ಕರ್ನಾಟಕದ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು ಎಂದಿದ್ದಾರೆ.
ಕರ್ನಾಟಕದಿಂದ ದೇಶಕ್ಕೆ ಹಲವು ಕೊಡುಗೆ ಸಿಕ್ಕಿದೆ. ಕನ್ನಡ ನೆಲದ ಸಾಧಕರನ್ನು ಗೌರವಿಸುವುದು ನಮ್ಮ ಕರ್ತವ್ಯ. ನಾವು ಕರ್ನಾಟಕಕ್ಕೆ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿದ್ದೇವೆ ಎಂದರು.
ಪ್ರಧಾನಿ ಮೋದಿ ಭಾಷಣದ ಹೈಲೆಟ್ಸ್
1) ಕೆಂಪೇಗೌಡರ ಚಿಂತನೆಗಳು ಭವಿಷ್ಯದ ಕರ್ನಾಟಕ, ಭಾರತ ಹೇಗಿರಬೇಕು ಎಂಬ ಬಗ್ಗೆ ಪ್ರೇರಣೆ ನೀಡುತ್ತದೆ. ಭಾರತದ ಭವಿಷ್ಯಕ್ಕೆ ಸ್ಟಾರ್ಟ್ಅಪ್ ಮುಖ್ಯ. ಅದಕ್ಕೆ ಬೆಂಗಳೂರು ಬಹುದೊಡ್ಡ ಕೊಡುಗೆ ನೀಡುತ್ತದೆ ಎಂದರು.
2) ಭಾರತ ಇನ್ನು ಕುಂಟುವುದಿಲ್ಲ, ಅಭಿವೃದ್ಧಿ ಪಥದಲ್ಲಿ ವೇಗವಾಗಿ ಹೆಜ್ಜೆ ಹಾಕುತ್ತದೆ, ಡಬಲ್ ಇಂಜಿನ್ ಸರ್ಕಾರದ ಅಭಿವೃದ್ದಿ ವೇಗ ಇನ್ನಷ್ಟು ಹೆಚ್ಚಾಗಲಿದೆ ಎಂದರು.
3) ಕರ್ನಾಟಕಕ್ಕೆ ಮೇಡ್ ಇನ್ ಇಂಡಿಯಾ ರೈಲು ಸಿಕ್ಕಿದೆ, ಕರ್ನಾಟಕಕ್ಕೆ ವಂದೇ ಭಾರತ್ ರೈಲು ದೊರಕಿದೆ. ಟರ್ಮಿನಲ್ 2 ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದೇನೆ ಇಲ್ಲಿ ಬಂದು ನೋಡಿದಾಗ ಫೋಟೋ ಗಿಂತ ಬಹಳ ಸುಂದರವಾಗಿದೆ ಎಂದರು.
4) ಕರ್ನಾಟಕಕ್ಕೆ ಇಂದು ಮೊದಲ ಬಾರಿಗೆ ಮೇಡ್ ಇನ್ ಇಂಡಿಯಾ ವಂದೇ ಭಾರತ್ ರೈಲು ಸಿಕ್ಕಿದೆ. ದೇಶದ ಸ್ಟಾರ್ಟ್ ಅಪ್ ಕ್ಯಾಪಿಟಲ್ ಬೆಂಗಳೂರನ್ನು ಚೆನ್ನೈ ಹಾಗೂ ಮೈಸೂರಿನೊಂದಿಗೆ ಜೋಡಿಸುತ್ತದೆ ಎಂದು ಹೇಳಿದರು.
5) ನಾವು ಕರ್ನಾಟಕಕ್ಕೆ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಕೆಂಪೇಗೌಡರ ಚಿಂತನೆಗಳು ಭವಿಷ್ಯದ ಕರ್ನಾಟಕ, ಭಾರತ ಹೇಗಿರಬೇಕು ಎಂಬ ಬಗ್ಗೆ ಪ್ರೇರಣೆ ನೀಡುತ್ತದೆ. ಭಾರತದ ಭವಿಷ್ಯಕ್ಕೆ ಸ್ಟಾರ್ಟ್ಅಪ್ ಮುಖ್ಯ. ಅದಕ್ಕೆ ಬೆಂಗಳೂರು ಬಹುದೊಡ್ಡ ಕೊಡುಗೆ ನೀಡುತ್ತದೆ ಎಂದರು.
6) ಬೆಂಗಳೂರಿನ ವಿಶೇಷ ಕಾರ್ಯಕ್ರಮಕ್ಕೆ ಬಂದಿದ್ದು ನನ್ನ ಸೌಭಾಗ್ಯ . ಇಂದು ಪೂಜ್ಯ ಸ್ವಾಮೀಜಿ ನನಗೆ ಅಶೀರ್ವಾದ ನೀಡಿದ್ದಾರೆ. ಅವರಿಗೆ ನಾನು ಅಭಾರಿಯಾಗಿದ್ದೇನೆ.
7) ಇದಕ್ಕೂ ಮುನ್ನ ಪ್ರಧಾನಿ ಮೋದಿ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಬಳಿಯಲ್ಲಿನ ವಿಶ್ವದ ಅತಿ ಎತ್ತರದವಾದ 108 ಅಡಿ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದು, ಬಳಿಕ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿದ್ದಾರೆ.
8) ಕರ್ನಾಟಕದಿಂದ ದೇಶಕ್ಕೆ ಹಲವು ಕೊಡುಗೆ ಸಿಕ್ಕಿದೆ. ಕನ್ನಡ ನೆಲದ ಸಾಧಕರನ್ನು ಗೌರವಿಸುವುದು ನಮ್ಮ ಕರ್ತವ್ಯ. ನಾವು ಕರ್ನಾಟಕಕ್ಕೆ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿದ್ದೇವೆ.
9) ಕೆಂಪೇಗೌಡರ ಚಿಂತನೆಗಳು ಭವಿಷ್ಯದ ಕರ್ನಾಟಕ, ಭಾರತ ಹೇಗಿರಬೇಕು ಎಂಬ ಬಗ್ಗೆ ಪ್ರೇರಣೆ ನೀಡುತ್ತದೆ. ಭಾರತದ ಭವಿಷ್ಯಕ್ಕೆ ಸ್ಟಾರ್ಟ್ಅಪ್ ಮುಖ್ಯ. ಅದಕ್ಕೆ ಬೆಂಗಳೂರು ಬಹುದೊಡ್ಡ ಕೊಡುಗೆ ನೀಡುತ್ತದೆ ಎಂದರು.
10) ಭಾರತ ಇನ್ನು ಕುಂಟುವುದಿಲ್ಲ, ಅಭಿವೃದ್ಧಿ ಪಥದಲ್ಲಿ ವೇಗವಾಗಿ ಹೆಜ್ಜೆ ಹಾಕುತ್ತದೆ, ಡಬಲ್ ಇಂಜಿನ್ ಸರ್ಕಾರದ ಅಭಿವೃದ್ದಿ ವೇಗ ಇನ್ನಷ್ಟು ಹೆಚ್ಚಾಗಲಿದೆ ಎಂದರು.
11) ಕುಲ ಕುಲ ಎಂದು ಹೊಡೆದಾಡಬೇಡಿ ಎಂದು ಕನದಾಸರ ಕೀರ್ತನೆ ಮೂಲಕ ಜಾಗೃತಿ ಮೂಡಿಸಿದ ಪ್ರಧಾನಿ ಮೋದಿ.