ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 18ರಂದು ವಾರಣಾಸಿಗೆ ಭೇಟಿ ನೀಡಲಿದ್ದು, ಅಲ್ಲಿ ರೈತರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರದಲ್ಲಿ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ರಚನೆಯಾದ ನಂತರ ಇದು ವಾರಣಾಸಿಗೆ ಪ್ರಧಾನಿ ಮೋದಿಯವರ ಮೊದಲ ಭೇಟಿಯಾಗಿದೆ ಎಂದು ಬಿಜೆಪಿ ಕಾಶಿ ಪ್ರದೇಶದ ಬಿಜೆಪಿ ಮಾಧ್ಯಮ ಉಸ್ತುವಾರಿ ನವರತನ್ ರಾಠಿ ಹೇಳಿದ್ದಾರೆ.
ವಾರಣಾಸಿ ಬಿಜೆಪಿ ಪದಾಧಿಕಾರಿಗಳ ಸಭೆ ಗುಲಾಬ್ ಬಾಗ್ ನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದಿದ್ದು, ಪ್ರಧಾನಿಯ ಭೇಟಿಗೆ ಸಂಬಂಧಿಸಿದ ಸಿದ್ಧತೆಗಳ ಯೋಜನೆಯ ಬಗ್ಗೆ ಚರ್ಚಿಸಲಾಯಿತು. ಕಿಸಾನ್ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ನಂತರ, ಪ್ರಧಾನಿ ಮೋದಿ ಬಾಬಾ ಕಾಶಿ ವಿಶ್ವನಾಥನಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ ಮತ್ತು ದಶಾಶ್ವಮೇಧ ಘಾಟ್ನಲ್ಲಿ ಗಂಗಾ ಆರತಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಟೇಲ್ ಹೇಳಿದರು.