ಮಂಗಳೂರು: ಸೆ. 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಈಗಾಗಲೇ ನಗರದಲ್ಲಿ ಮೋದಿ ಸ್ವಾಗತಕ್ಕಾಗಿ ವೇದಿಕೆ ಸಜ್ಜಾಗಿದೆ. ಸೆ. 2 ರಂದು ನಡೆಯುವ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
BIGG NEWS: ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಪಂಜಾಬ್ ಸ್ಪೀಕರ್, ಇಬ್ಬರು ಸಚಿವರ ವಿರುದ್ಧ ಜಾಮೀನು ರಹಿತ ವಾರಂಟ್
ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಸುನೀಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಅನೇಕರು ಸಭೆ ನಡೆಸಿದ್ದಾರೆ.
ಗೋಲ್ಡ್ ಫಿಂಚ್ ಸುತ್ತಮುತ್ತ ಭದ್ರತೆ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ , ಕೇಂದ್ರ ಸಚಿವ ಸರ್ಬಾವಂದ ಸೋನೋವಾಲಾ, ಪ್ರಹ್ಲಾದ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ನಳಿನ್ ಕುಮಾರ್ ಕಟೀಲ್ , ಸಚಿವರಾದ ಸುನೀಲ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.