ಕಲಬುರಗಿ : ಇಂದು ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಈ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಲ್ಲಿ ಮಿನಿ ರೋಡ್ ಶೋ ನಡೆಸಲಿದ್ದು, ಬಳಿಕ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಮಾರ್ಚ್ 16ರ ಇಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಎನ್.ವಿ. ಮೈದಾನದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ.
ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.