ಬೆಂಗಳೂರು : ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಗೆ ಪ್ರಧಾನಮಂತ್ರಿಗಳು ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಅ.8ರಂದು ಜನತಾ ಮಿತ್ರ ಸಮಾರೋಪ ಸಮಾವೇಶ: ಪೂರ್ವ ಸಿದ್ಧತಾ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ
ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ 6 ನೇ ಸಭೆಯಲ್ಲಿ ಅವರು ಮಾತನಾಡಿ, ನಾಡಿನ ವಿವಿಧ ಸ್ಥಳಗಳಿಂದ ಪವಿತ್ರ ಮೃತ್ತಿಕೆ ಹಾಗೂ ಜಲಸಂಗ್ರಹಿಸುವ ಅಭಿಯಾನದಲ್ಲಿ ತಾಲ್ಲೂಕು ಕೇಂದ್ರಗಳಿಗೆ ಮಣ್ಣನ್ನು ತಲುಪಿಸುವಂತೆ ಸೂಚನೆ ನೀಡಿ, ಅಲ್ಲಿಂದ ಜಿಲ್ಲಾ ಕೇಂದ್ರಕ್ಕೆ ತರಿಸುವಂತೆ ಸೂಚಿಸಿದರು. ಕೆಂಪೇಗೌಡರ ಜೀವನಚರಿತ್ರೆಯನ್ನು ಬಿಂಬಿಸುವ ವೀಡಿಯೋ ಮ್ಯಾಪಿಂಗ್ ಹಾಗೂ ನೃತ್ಯ ರೂಪಕ ಆಯೋಜಿಸಲು ಅನುಮತಿ ನೀಡಿದರು.
ಕೆಂಪೇಗೌಡರ ವೀರ ಸಮಾಧಿ ಅಭಿವೃದ್ಧಿಗೆ ಭೂಸ್ವಾಧೀನ ಪ್ರಕ್ರಿಯೆ, 46 ತಾಣಗಳಲ್ಲಿ ನಾಮಫಲಕಗಳ ಅಳವಡಿಕೆ, ಮಾಗಡಿ ಕೋಟೆ ಸಂರಕ್ಷಣೆ ಮುಂತಾದ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದರು.
‘ST ಸಮುದಾಯ’ದವರಿಗೆ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿ – ಸಿದ್ಧರಾಮಯ್ಯ ಆಗ್ರಹ
ಸಭೆಯಲ್ಲಿ ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ನಾರಾಯಣ್, ಆರ್.ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು.