ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ( Karnataka Assembly Election 2023 ) ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಮುಂದುವರೆದಿದೆ. ಮಾರ್ಚ್ 25ರಂದು ಮತ್ತೆ ಕರ್ನಾಟಕಕ್ಕೆ ಅವರು ಆಗಮಿಸಲಿದ್ದಾರೆ. ಅಂದು ಚಿಕ್ಕಬಳ್ಳಾಪುರದಲ್ಲಿನ ವೈದ್ಯಕೀಯ ಕಾಲೇಜು, ಬೆಂಗಳೂರಿನ ವೈಟ್ ಫೀಲ್ಟ್ ನೂತನ ಮೆಟ್ರೋ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಈ ಬಗ್ಗೆ ಅವರ ಪ್ರವಾಸದ ವಿವರ ಅಧಿಕೃತಗೊಂಡಿದ್ದು ಮಾರ್ಚ್ 25ರಂದು ದೆಹಲಿಯಿಂದ ಹೊರಟು, ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣವನ್ನು ಬೆಳಿಗ್ಗೆ 10.10ಕ್ಕೆ ತಲುಪಲಿದ್ದಾರೆ.
ಹೆಚ್ ಎಎಲ್ ಏರ್ ಪೋರ್ಟ್ ನಿಂದ ( HAL Airport ) ಸೇನಾ ಹೆಲಿಕ್ಯಾಪ್ಟರ್ ಮೂಲಕ ಬೆಳಿಗ್ಗೆ 10.35ಕ್ಕೆ ಚಿಕ್ಕಬಳ್ಳಾಪುರ ತಲುಪಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಿರ್ಮಿಸಿರುವಂತ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ, ಸಂಶೋಧನ ಸಂಸ್ಥೆಯನ್ನು ಬೆಳಿಗ್ಗೆ 10.45ಕ್ಕೆ ಉದ್ಘಾಟನೆ ಮಾಡಲಿದ್ದಾರೆ.
ಮಧ್ಯಾಹ್ನ 12.55ಕ್ಕೆ ಅಲ್ಲಿಂದ ಹೊರಟು ಬೆಂಗಳೂರಿನ ವೈಟ್ ಫೀಲ್ಡ್ ಮೆಟ್ರೋ ನಿಲ್ದಾಣವನ್ನು ( Metro Station ) ತಲುಪಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನೂತನ ವೈಟ್ ಫೀಲ್ಡ್ ಮೆಟ್ರೋ ನಿಲ್ದಾಣವನ್ನು ಉದ್ಘಾಟಿಸಲಿರುವಂತ ಅವರು, ಬಳಿಕ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.
BIG NEWS: ಚೆನ್ನಗಿರಿಯಲ್ಲಿ ಬಿಜೆಪಿ vs ಬಿಜೆಪಿ ನಡುವೆ ತಾರಕಕ್ಕೇರಿದ ಸಮರ: ಅರ್ಧಕ್ಕೆ ನಿಂತ ವಿಜಯಸಂಕಲ್ಪ ಯಾತ್ರೆ