ಗುಜರಾತ್ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ವಡೋದರಾದಲ್ಲಿ ಸಿ-295(C-295) ಸಾರಿಗೆ ವಿಮಾನ ತಯಾರಿಕಾ ಘಟಕಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh), ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಮತ್ತು ಗುಜರಾತ್ ಸಿಎಂ ಭೂಪೇಂದ್ರಭಾಯಿ ಪಟೇಲ್ ಪಾಲ್ಗೊಳ್ಳಲಿದ್ದಾರೆ.
ಯುರೋಪಿಯನ್ ರಕ್ಷಣಾ ದೈತ್ಯ ಏರ್ಬಸ್ ಮತ್ತು ಟಾಟಾ ಸಮೂಹವನ್ನು ಒಳಗೊಂಡಿರುವ ಒಕ್ಕೂಟವು ವಡೋದರಾದಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) C-295 ಸಾರಿಗೆ ವಿಮಾನವನ್ನು ತಯಾರಿಸಲಿದೆ ಎಂದು ರಕ್ಷಣಾ ಸಚಿವಾಲಯ ಗುರುವಾರ ಪ್ರಕಟಿಸಿದೆ.
ಈ ಸೌಲಭ್ಯವು ವಿಮಾನದ ರಫ್ತು ಮತ್ತು IAF ಹೆಚ್ಚುವರಿ ಆದೇಶಗಳನ್ನು ಪೂರೈಸುತ್ತದೆ. ಈ ವಿಮಾನವನ್ನು ನಾಗರಿಕ ಉದ್ದೇಶಗಳಿಗೂ ಬಳಸಬಹುದು ಎಂದು ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಭಾನುವಾರದಿಂದ ಮೂರು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ. ಈ ವೇಳೆ ವಿಧಾನಸಭೆ ಚುನಾವಣೆಯನ್ನು ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆಯಿರುವ ರಾಜ್ಯದ ವಿವಿಧ ಭಾಗಗಳಲ್ಲಿ ಹಲವಾರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
BREAKING NEWS : ಸೊಮಾಲಿಯಾದಲ್ಲಿ ಎರಡು ಕಾರ್ ಬಾಂಬ್ ಸ್ಫೋಟ: 100 ಮಂದಿ ಸಾವು, 300 ಕ್ಕೂ ಹೆಚ್ಚು ಜನರಿಗೆ ಗಾಯ