ಅಹಮದಾಬಾದ್: ನಗರದ ಯು ಎಸ್ ಮೆಹ್ತಾ ಆಸ್ಪತ್ರೆಯಲ್ಲಿ ಇಂದು ಅನಾರೋಗ್ಯದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಾಯಿ ಹೀರಾಬೆನ್ ನಿಧನರಾಗಿದ್ದರು.
BIG BREAKING NEWS: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಪಂಚಭೂತಗಳಲ್ಲಿ ಲೀನ | PM Modi Mother
ಅವರ ಅಂತ್ಯಕ್ರಿಯೆಯನ್ನು ಗಾಂಧಿನಗರದ ಸೆಕ್ಟರ್ 30ರ ರುದ್ರಭೂಮಿಯಲ್ಲಿ ನೆರವೇರಿಸಲಾಗಿದೆ. ಪ್ರಧಾನಿ ಮೋದಿ ತಾಯಿಯ ಪಾರ್ಥೀವ ಶರೀರದ ಚಿತೆಗೆ ಅಗ್ನಿಸ್ಪರ್ಷ ಮಾಡಿದರು. ಈ ಮೂಲಕ ಮೋದಿಯವರ ತಾಯಿ ಹೀರಾ ಬೆನ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಇದೀಗ ತಾಯಿ ಹೀರಾಬೆನ್ ಅಂತ್ಯಕ್ರಿಯೆ ಬಳಿಕ ಪ್ರಧಾನಿ ಮೋದಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಯಥಾಸ್ಥಿತಿ ತಮ್ಮ ಕರ್ತವ್ಯ ಮೋದಿ ಅವರು ಮುಂದುವರಿಸಲಿದ್ದಾರೆ. ನಿಗದಿಯಂತೆ ದಿನವಿಡೀ ಬಂಗಾಳದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಕೆಲ ಹೊತ್ತಿನಲ್ಲಿ ಗುಜರಾತ್ ರಾಜಭವನಕ್ಕೆ ಹೋಗಲಿದ್ದಾರೆ. ಪಶ್ಚಿಮಬಂಗಾಳದ 7800 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಲಿದ್ದಾರೆ.