ಬೆಂಗಳೂರು : ನವೆಂಬರ್ 11 ರಂದು ಪ್ರಧಾನಿ ಮೋದಿಯವರು ಬೆಂಗಳೂರಿಗೆ ಭೇಟಿ ನೀಡಲಿದ್ದು, ದಕ್ಷಿಣ ಭಾರತದಲ್ಲಿ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ ಎಕ್ಸ್ಪ್ರೆಸ್ ಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
BREAKING NEWS: 2019ರ ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ ಶಿಕ್ಷೆ
ಅವರು ಇಂದು ಗಾಂಧಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಧಾನಿ ಮೋದಿಯವರು ನವೆಂಬರ್ 11 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ನ ಉದ್ಘಾಟನೆಯನ್ನು ಮಾಡಲಿದ್ದಾರೆ.ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ ಎಂದರು.
SBIನ ʻUTSAVʼ ಠೇವಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ನಾಳೆಯೇ ಕೊನೆ ದಿನ… ಇಲ್ಲಿದೆ ಪ್ರಮುಖ ಮಾಹಿತಿ
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯಅತಿಥಿಯಾಗಿ ಬರುವ ಬಗ್ಗೆ 3-4 ಗಣ್ಯರ ಜೊತೆ ಈಗಾಗಲೇ ಚರ್ಚಿಸಲಾಗಿದ್ದು, ಅವರ ಬರುವಿಕೆಯ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರು ಖಾತ್ರಿಗೊಳಿಸಲಿದ್ದಾರೆ ಎಂದರು.
ಬಂಡೆಮಠದ ಸ್ವಾಮೀಜಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಗೆ ಆದೇಶಿದ್ದು, ತನಿಖೆಯ ನಂತರ ಎಲ್ಲ ಸತ್ಯಗಳೂ ಹೊರಬೀಳಲಿದೆ ಎಂದು ತಿಳಿಸಿದರು.